ಪ್ರಜಾವಾಣಿ ವಾರ್ತೆ

ತುಮಕೂರು: ಭಾರತೀಯ ಮಕ್ಕಳ ಚಿಕಿತ್ಸಾ ಅಕಾಡೆಮಿ (ಐಎಪಿ), ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ, ಸಿದ್ಧಾರ್ಥ ವೈದ್ಯಕೀಯ ಕಾಲೇಜು, ಸಿದ್ಧಗಂಗಾ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ‘ತೀವ್ರ ನಿಗಾ ಘಟಕದಲ್ಲಿ ಮಕ್ಕಳ ಚಿಕಿತ್ಸೆ’ ಕುರಿತ ವೈದ್ಯಕೀಯ ಸಮ್ಮೇಳನ ಸೆ. 12ರಿಂದ 14ರ ವರೆಗೆ ನಡೆಯಲಿದೆ.

ರಾಜ್ಯ ಮಟ್ಟದ 16ನೇ ಸಮ್ಮೇಳನ ಮೂರು ದಿನಗಳು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿದ್ದು, 500ಕ್ಕೂ ತಜ್ಞರು ಭಾಗವಹಿಸಲಿದ್ದಾರೆ ಎಂದು ಐಎಪಿ ತುಮಕೂರು ಘಟಕದ ಅಧ್ಯಕ್ಷ ಡಾ.ಸಿ.ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಹೈದರಾಬಾದ್, ಮುಂಬೈ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಗಳಿಂದ ತಜ್ಞರು ಪಾಲ್ಗೊಳ್ಳಲಿದ್ದು, ವಿಚಾರ ಮಂಡನೆಯಾಗಲಿದೆ ಎಂದರು.

ಐಎಪಿ ಕಾರ್ಯದರ್ಶಿ ಡಾ.ಸಿ.ಕೆ.ಚಂದನ್, ‘ವಿದೇಶಗಳಲ್ಲಿ ಮಕ್ಕಳ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡುತ್ತಿರುವ ನವೀನ ವಿಧಾನಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಹೇಳಿದರು.

ಶ್ರೀದೇವಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ‘ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ಸಮ್ಮೇಳನ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿರಿಯ ತಜ್ಞ ವೈದ್ಯರು ಭಾಗವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಎಚ್.ಪಲ್ಲವಿ, ವ್ಯೆದ್ಯಕೀಯ ಅಧೀಕ್ಷಕ ಡಾ.ಮೋಹನ್ ಕುಮಾರ್, ಡಾ.ಮೌನೇಶ್ ಪತ್ತಾರ್, ಡಾ.ಸುಮಂತ್ ಪಾಟೀಲ್, ಡಾ.ಈಶ್ವರ್ ಮಕ್ಕಂ, ಡಾ.ಮಧುಚಂದನ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.