ಮಂಗಳವಾರ, ಜನವರಿ 28, 2020
19 °C

ಸಿದ್ದರಾಮಯ್ಯ ರಾಜೀನಾಮೆ ವಾಪಾಸ್‍ಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ನಗರದ ಟೌನ್‌ಹಾಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟಿಸಿದರು.

ಮುಖಂಡ ಲಕ್ಕಪ್ಪ ಮಾತನಾಡಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಅವರನ್ನು ಹೊಣೆ ಮಾಡುವುದು ಸರಿಯಲ್ಲ. ಅವರನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷ ಉಳಿಸಬೇಕು ಎಂದರೆ ಸಿದ್ದರಾಮಯ್ಯ ಅವರನ್ನು ಮುಂದುವರಿಸುವ ನಿಟ್ಟಿನಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಏಕಾಂಗಿಯಾಗಿ ಅವರು ಪಕ್ಷದ ಪರ ಪ್ರಚಾರ ಮಾಡಿದರು. ಸೋಲಿಗೆ ಮುಖಂಡರ ಅಸಹಕಾರವೇ ಕಾರಣ ಎಂದರು.

ಪ್ರಚಾರದಲ್ಲಿ ಭಾಗವಹಿಸದ ಮುಖಂಡರ ಮೇಲೆ ಪಕ್ಷ ಶಿಸ್ತುಕ್ರಮ ಜರುಗಿಸಬೇಕೆ ಹೊರತು, ಪಕ್ಷದ ಗೆಲುವಿಗಾಗಿ ಹೋರಾಡಿದವರ ಮೇಲೆ ಅಲ್ಲ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಟಿ.ಪಿ.ಮಂಜುನಾಥ್, ಸುರೇಶ್, ಲಕ್ಷ್ಮಿನಾರಾಯಣ್, ಮೋಹನ್, ಅನಿಲ್, ತು.ಬಿ.ಮಲ್ಲೇಶ್, ಸುನೀತಾ ನಟರಾಜ್, ಜ್ವಾಲಾಮಾಲಾ ರಾಜಣ್ಣ, ರಾಕೇಶ್, ರಾಜೇಶ್ ದೊಡ್ಮನೆ, ಮಹೇಶ್ ಇದ್ದರು.

ಪ್ರತಿಕ್ರಿಯಿಸಿ (+)