ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ನಲ್ಲಿ ತೆರಳುವಾಗ ವಾಹನ ಡಿಕ್ಕಿ: ಯುವಕ ಸಾವು

Last Updated 3 ಫೆಬ್ರುವರಿ 2023, 14:41 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಓಬಳಾಪುರದ ಬಳಿ ಶುಕ್ರವಾರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಿಪಟೂರಿನ ಹೊಳವನಹಳ್ಳಿ ಗ್ರಾಮದ ಸಂಜಯ್‌ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಜಯ್‌ ಮತ್ತು ಯೋಗೀಶ್‌ ಇಬ್ಬರು ನಗರದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಯೋಗೀಶ್‌ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆಯ ಸರ ಕಳವು
ತುಮಕೂರು
: ನಗರದ ಜಯನಗರ ಪೂರ್ವ ಬಡಾವಣೆಯ ಎರಡನೇ ಅಡ್ಡರಸ್ತೆಯಲ್ಲಿ ಶುಕ್ರವಾರ ಕಳ್ಳರು ಕೈಚಳಕ ತೋರಿದ್ದು, ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ನೃಪತುಂಗ ಬಡಾವಣೆಯ ಸುನಂದಾ ಎಂಬುವರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್‌ನಲ್ಲಿ ಬಂದ ಕಳ್ಳರು ಸುಮಾರು 60 ಗ್ರಾಂ ತೂಕದ ಸರ ಕಿತ್ತುಕೊಂಡು ಜಾಗ ಖಾಲಿ ಮಾಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT