ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್ | ‘ಶಾಸಕರ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು’

Published 20 ಜನವರಿ 2024, 14:29 IST
Last Updated 20 ಜನವರಿ 2024, 14:29 IST
ಅಕ್ಷರ ಗಾತ್ರ

ಕುಣಿಗಲ್: ‘ಕುದುರೆ ಫಾರಂ ಉಳಿಸಿಕೊಳ್ಳುವ ಹೋರಾಟದ ಭರದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಲರಾಂ ಅವರು ಶಾಸಕ ರಂಗನಾಥ್‌ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸುತ್ತಿದ್ದಾರೆ’ ಎಂದು ಆರೋಪಿಸಿ ಹುಲಿಯೂರುದುರ್ಗ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಸಭೆ ನಡೆಸಿದರು.

ಸಭೆಯಲ್ಲಿ ಅಧ್ಯಕ್ಷ ವೆಂಕಟರಾಮ್ ಮಾತನಾಡಿ, ಬಲರಾಂ ಅವರು ಕುದುರೆ ಫಾರಂ ವಿಚಾರದಲ್ಲಿ ಶಾಸಕರ ನಿರ್ಧಾರಗಳ ಸ್ಪಷ್ಟ ಮಾಹಿತಿ ಪಡೆಯದೆ ಸಾರ್ವಜನಿಕ ಸಭೆಯಲ್ಲಿ ಟೀಕಿಸಿದ್ದಾರೆ. ವೈಯುಕ್ತಿಕ ವಿಚಾರಗಳ ನಿಂದನೆಯನ್ನು ಯಾವುದೇ ಕಶರಣಕ್ಕೂ ಸಹಿಸುವುದಿಲ್ಲ ಎಂದರು.

ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ ಮಾತನಾಡಿ, ಕುದುರೆ ಫಾರಂ ಗುತ್ತಿಗೆ ಅವಧಿ ಮುಗಿದಿದೆ. ಶ್ರೀಮಂತರ ಪಾಲಾಗುವುದನ್ನು ತಪ್ಪಿಸಿ, ತಾಲ್ಲೂಕಿನ ರೈತರ, ನಿರುದ್ಯೋಗಿ ಯುವಕರ ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.ರಂಗನಾಥ್, ಸಂಸದ ಡಿ.ಕೆ.ಸುರೇಶ್ ಚರ್ಚೆ ನಡೆಸುತ್ತಿದ್ದಾರೆ. ಯಾವುದೇ ನಿರ್ಧಾರಗಳನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಲ್ಲಾ ಬಕಾಷ್, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಮತ್ತು ಸಂಸದರ ಬಗ್ಗೆ ಸಭೆ ಸಮಾರಂಭಗಳಲ್ಲಿ ಕೀಳಾಗಿ ಮಾತನಾಡುತ್ತಲೇ ಬಿಜೆಪಿ, ಜೆಡಿಎಸ್ ಅಧಿಕಾರ ಕಳೆದುಕೊಂಡಿದ್ದಾರೆ. ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಶಾಸಕ ಡಾ.ರಂಗನಾಥ್ ಮತ್ತು ಸಂಸದ ಡಿ.ಕೆ.ಸುರೇಶ್ ಮತ್ತೆ ಮತ್ತೆ ಆಯ್ಕೆಯಾಗುತ್ತಿದ್ದಾರೆ ಎಂದರು.

ಸಭೆಯಲ್ಲಿ ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮತಿ, ಮುಖಂಡರಾದ ಜೆಸಿಪಿ ರಾಜಣ್ಣ, ಕೋಘಟ್ಟ ರಾಜಣ್ಣ, ಪಾಪಣ್ಣ, ಪುರಸಭೆ ಮಾಜಿ ಅಧ್ಯಕ್ಷ ನಾಗೇಂದ್ರ, ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್, ಶಂಕರ್, ನಾಗೇಶ್, ಬೇಗೂರು ಮೂರ್ತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT