ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಚ್.ಡಿ ಪ್ರವೇಶ: ಒಂದೇ ದಿನದಲ್ಲಿ ಫಲಿತಾಂಶ

Published 17 ಏಪ್ರಿಲ್ 2024, 6:21 IST
Last Updated 17 ಏಪ್ರಿಲ್ 2024, 6:21 IST
ಅಕ್ಷರ ಗಾತ್ರ

ತುಮಕೂರು: ವಿಶ್ವವಿದ್ಯಾಲಯವು 2023-24ನೇ ಸಾಲಿನ ಪಿಎಚ್.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಒಂದೇ ದಿನದಲ್ಲಿ ಪ್ರಕಟಿಸಿದೆ.

ಏ. 15ರಂದು ಪರೀಕ್ಷೆ ನಡೆಸಿ, ಏ. 16ರಂದು ಫಲಿತಾಂಶ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವಿಶ್ವವಿದ್ಯಾಲಯ ಜಾಲ ತಾಣದಲ್ಲಿ www.tumkuruniversity.ac.in ವೀಕ್ಷಿಸಬಹುದಾಗಿದೆ.

ವಿ.ವಿ ಒಟ್ಟು 19 ವಿಷಯಗಳಲ್ಲಿ ಪಿಎಚ್.ಡಿ ಪದವಿಗೆ ಅರ್ಜಿ ಆಹ್ವಾನಿಸಿತ್ತು. 413 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 315 ಮಂದಿ ಪ್ರವೇಶ ಪರೀಕ್ಷೆ ಬರೆದಿದ್ದರು. ಎಲ್ಲಾ ವಿಷಯಗಳಲ್ಲೂ ಬಹು ಆಯ್ಕೆಯ ವಸ್ತುನಿಷ್ಠ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು. ಅಭ್ಯರ್ಥಿಗಳು ಒಎಂಆರ್ ಪ್ರತಿಯಲ್ಲಿ ಉತ್ತರ ಭರ್ತಿ ಮಾಡಬೇಕಿತ್ತು. ಈ ವಿಧಾನ ಅನುಸರಿಸಿದ ಪರಿಣಾಮ ಒಂದೇ ದಿನದಲ್ಲಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT