ಗ್ರಾಮಾಭಿವೃದ್ಧಿಗಾಗಿ ಯೋಜನೆ ರೂಪಿಸಿ

6
ಎನ್ಎಸ್ಎಸ್ ಶಿಬಿರದಲ್ಲಿ ಪ್ರೊ.ಪರಮಶಿವಯ್ಯ ಅಭಿಪ್ರಾಯ

ಗ್ರಾಮಾಭಿವೃದ್ಧಿಗಾಗಿ ಯೋಜನೆ ರೂಪಿಸಿ

Published:
Updated:

ತುಮಕೂರು: ಎನ್ಎಸ್ಎಸ್ ಶಿಬಿರಾರ್ಥಿಗಳು ಶಿಬಿರ ನಡೆಯುವ ಗ್ರಾಮಕ್ಕೆ ಸಿಗಬೇಕಾದ ಸೌಲಭ್ಯಗಳು, ಅನುದಾನಗಳು ಮತ್ತು ಯೋಜನೆಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ.ಪರಮಶಿವಯ್ಯ ತಿಳಿಸಿದರು.

ತುಮಕೂರು ತಾಲ್ಲೂಕಿನ ಮಲ್ಲಸಂದ್ರದ ಗ್ರಾಮ ಪಂಚಾಯಿತಿಯ ಹಬ್ಬತ್ತನಹಳ್ಳಿ ಗ್ರಾಮದಲ್ಲಿ ಅನನ್ಯ ಕಾಲೇಜಿನಿಂದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರದ 5ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ವಾಣಿಜ್ಯ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ಶೇಖರ್‌ ಮಾತನಾಡಿ, ’ಗ್ರಾಮದ ಜನರು ಪ್ರಾಥಮಿಕ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿರಬಾರದು. ಉನ್ನತ ಶಿಕ್ಷಣಕ್ಕೂ ಗಮನಹರಿಸಬೇಕು’ ಎಂದರು.

ವಿಶ್ವವಿದ್ಯಾಲಯ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ದೇವರಾಜಪ್ಪ, ಅನನ್ಯ ಸಂಸ್ಥೆಯ ಟ್ರಸ್ಟಿ ಎಚ್.ಹರೀಶ್, ಪ್ರಾಂಶುಪಾಲ ಡಾ.ಎಂ.ವಿಶ್ವಾಸ್, ಶಿಬಿರಾಧಿಕಾರಿ ಮಂಜುನಾಥ್, ಉಪನ್ಯಾಸಕ ಕಾಂತರಾಜು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !