ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಹೃದ್ರೋಗ ಚಿಕಿತ್ಸೆಗೆ ಯೋಜನೆ

Last Updated 5 ಡಿಸೆಂಬರ್ 2021, 5:10 IST
ಅಕ್ಷರ ಗಾತ್ರ

ತುಮಕೂರು: ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ, ಶಿಕ್ಷಣ ಒದಗಿಸುವ ಕೆಲಸವನ್ನು ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮಾಡುತ್ತಿದೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.

ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ‘ಬ್ರಿಟಿಷರ ಕಾಲದಲ್ಲಿ ಮೈಸೂರು ಸಂಸ್ಥಾನದಲ್ಲಿ ಇದ್ದಂತಹ ಉತ್ತಮವಾದ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ಮಾದರಿಯನ್ನು ಸಿದ್ಧಾರ್ಥ ಸಂಸ್ಥೆ ಅಳವಡಿಸಿಕೊಂಡಿದೆ’ ಎಂದರು.

ಹುಟ್ಟುವ ಮಕ್ಕಳಿಗೆ ಹೃದಯದ ಕಾಯಿಲೆ ಬರುತ್ತದೆ ಎಂದು ಯಾರೂ ಕೂಡ ನಿರೀಕ್ಷೆ ಮಾಡಿರುವುದಿಲ್ಲ. ಸಿದ್ಧಾರ್ಥ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿರುವ ಖುಷಿಯ ವಿಚಾರ. ಸಿದ್ಧಾರ್ಥ ಹೃದ್ರೋಗ ಕೇಂದ್ರ ಕೇವಲ ಒಂದು ವರ್ಷದಲ್ಲಿ ಗ್ರಾಮಾಂತರ ಪ್ರದೇಶದಜನ ಸಮುದಾಯಕ್ಕೆ ಯಶಸ್ವಿಯಾಗಿ ಮುಟ್ಟಿದೆ. ಈಗ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸಾ ಘಟಕ ಆರಂಭಿಸಿರುವುದು ಸಮಾಜಮುಖಿ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸಾಹೇ’ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಜಿ.ಪರಮೇಶ್ವರ, ‘ಆರೋಗ್ಯ ಕ್ಷೇತ್ರದಲ್ಲಿ ಮೈಸೂರು ಸಂಸ್ಥಾನ ಮಾಡಿದ ಅನನ್ಯ ಸೇವೆಗೆ ಹೋಬಳಿ ಮಟ್ಟದಲ್ಲಿರುವ ಆಸ್ಪತ್ರೆಗಳೇ ಸಾಕ್ಷಿ. ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೆ ಕೊಡುಗೆಯನ್ನು ನೀಡಿದ್ದಾರೆ’ ಎಂದರು.

ಕಾರ್ಡಿಯಾಕ್ ಫ್ರಾಂಟಿಡಾ ಸಂಸ್ಥೆ ನಿರ್ದೇಶಕ ಡಾ.ತಮೀಮ್ ಅಹಮದ್, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಟ್ರಸ್ಟಿ ಕನ್ನಿಕಾ ಪರಮೇಶ್ವರಿ, ಸಾಹೇ ವಿ.ವಿ ಉಪಕುಲಪತಿ ಪಿ.ಬಾಲಕೃಷ್ಣ ಶೆಟ್ಟಿ, ಕುಲಸಚಿವ ಎಂ.ಝೆಡ್.ಕುರಿಯನ್, ಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಸುಶಿಲ್‍ಚಂದ್ರ ಮಹಾಪಾತ್ರ, ಡಾ.ಪ್ರಭಾಕರ, ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಬಿ.ಪ್ರವೀಣ್ ಕುಡುವ, ಬೇಗೂರು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ವಾಸುದೇವ್, ಪರೀಕ್ಷಾಂಗ ವಿಭಾಗದ ನಿಯಂತ್ರಕ ಜಿ.ಎಂ.ಶಿವಕುಮಾರಪ್ಪ, ಉಪಕುಲಸಚಿವ ಸುಧೀಪ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT