ಮಂಗಳವಾರ, ಆಗಸ್ಟ್ 3, 2021
27 °C

ಪಿಎಲ್‌ಡಿ ಬ್ಯಾಂಕ್‌: 6ನೇ ಬಾರಿಗೆ ಕೃಷ್ಣಕುಮಾರ್ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಣಿಗಲ್: ತಾಲ್ಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿಜೆಪಿಯ ಡಿ.ಕೃಷ್ಣಕುಮಾರ್ ಮತ್ತು ಉಪಾಧ್ಯಕ್ಷರಾಗಿ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಿಎಲ್‌ಡಿ ಬ್ಯಾಂಕ್‌ನಲ್ಲಿ 14 ಬಿಜೆಪಿ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತವಿದ್ದು. ಬಹುತೇಕ ನಿರ್ದೇಶಕರು ಡಿ.ಕೃಷ್ಣಕುಮಾರ್ ಅವರೇ ಅಧ್ಯಕ್ಷ ರಾಗ ಬೇಕು ಎಂದು ಬಯಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು. ತಹಶೀಲ್ದಾರ್ ವಿಶ್ವನಾಥ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಕುಮಾರ್, ‘ಪೀಕಾರ್ಡ್ ಅಧ್ಯಕ್ಷರು ಕುಣಿಗಲ್, ಶಿರಾ ಮತ್ತು ಪಾವಗಡ ಶಾಖೆಗಳನ್ನು ವಿಲೀನಗೊಳಿಸಲು ಸಂಚು ಮಾಡಿದ್ದರು. ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಸಂಚು ವಿಫಲವಾಗಿದೆ. ಸಾಲದ ಮರುಪಾವತಿ ಇಲ್ಲದೆ ಸಹಕಾರಿ ಬ್ಯಾಂಕ್‌ಗಳು ಅಸ್ಥಿತ್ವ ಕಳೆದುಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಸರ್ಕಾರಗಳು ಸಹಕಾರ ಸಂಘಗಳ ಉಳಿವಿಗೆ ಕಾರ್ಯತಂತ್ರ ರೂಪಿಸಬೇಕಿದೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.