ಮಂಗಳವಾರ, ಫೆಬ್ರವರಿ 25, 2020
19 °C

ಶಿವಕುಮಾರ ಶ್ರೀ‌ ಪುಣ್ಯಾರಾಧನೆ: ಪ್ರಧಾನಿಗೆ ಆಹ್ವಾನ ‌ನೀಡಿದ ಸಿದ್ಧಗಂಗಾ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲಿಂಗೈಕ್ಯ ಶಿವಕುಮಾರ‌‌ ಸ್ವಾಮೀಜಿ ಅವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಹ್ವಾನ ನೀಡಿದರು.

ಸಂಸತ್ ಭವನದ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿ ಮಾಡಿದ‌‌ ಶ್ರೀಗಳು, ಜನವರಿ 21ರಂದು ನಡೆಯಲಿರುವ ಶಿವಕುಮಾರ ಶ್ರೀಗಳ ಮೊದಲ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಿದರು.

‘ಪುಣ್ಯಾರಾಧನೆ ಸಂದರ್ಭ ಗಣರಾಜ್ಯೋತ್ಸವ ಕಾರ್ಯಕ್ರಮ‌ ಇರುವುದರಿಂದ ಸಿದ್ಧಗಂಗೆಗೆ ಬರುವುದು ಸಾಧ್ಯವಾಗಲಿಕ್ಕಿಲ್ಲ. ಆದರೂ ಬರಲು ಪ್ರಯತ್ನಿಸುವೆ’ ಎಂದು ಪ್ರಧಾನಿ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ‌ ಮೊದಲೇ ಮಠಕ್ಕೆ ಭೇಟಿ ನೀಡಿ ತೆರಳುವಂತೆಯೂ ಕೋರಲಾಗಿದೆ ಎಂದು ಭೇಟಿಯ ನಂತರ ಶ್ರೀಗಳು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು