ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ | ಕಾಡುಹಂದಿಗಳ ಬೇಟೆ: ನಾಲ್ವರ ಬಂಧನ

Published 6 ಏಪ್ರಿಲ್ 2024, 14:01 IST
Last Updated 6 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ಕೊರಟಗೆರೆ: ಏಳು ಕಾಡು ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಪಟ್ಟಣದ ವಿನಾಯಕ ನಗರದ ಮಾರುತಿ(39), ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೂಲ್ ಪೇಟೆಯ ಸುರೇಶ (28), ರಂಗಮಪೇಟೆಯ ಪರಶುರಾಮ (22), ಕೊಪ್ಪಳ ತಾಲ್ಲೂಕಿನ ಗಾಂಧಿನಗರದ ಮಂಜುನಾಥ (28) ಬಂಧಿತರು. ಮತ್ತೊಬ್ಬ ಆರೋಪಿ ದೂಲ್ ಪೇಟೆಯ ಭೀಮಾ (38) ತಲೆಮರೆಸಿಕೊಂಡಿದ್ದಾರೆ.

ಆರೋಪಿಗಳು ಸುರಪುರ ಅರಣ್ಯ ಪ್ರದೇಶದಲ್ಲಿ ಏಳು ಕಾಡು ಹಂದಿಗಳನ್ನು ಬೇಟೆಯಾಡಿ ಅವುಗಳನ್ನು ಪಟ್ಟಣದ ವಿನಾಯಕ ನಗರದ ಮಾರುತಿ ಅವರ ಅಂಗಡಿಯಲ್ಲಿ ಮಾರಾಟಕ್ಕೆ ತಂದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿ ಸಿ. ರವಿ ನೇತೃತ್ವದ ತಂಡ ದಾಳಿ ನಡೆಸಿತ್ತು.

ಐವರ ವಿರುದ್ಧ ವನ್ಯ ಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT