ತುಮಕೂರು: ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿ ಬಸವರಾಜ ಎಂಬಾತನಿಗೆ ಪೋಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ ವಿಧಿಸಿದೆ.

2022ರ ಮೇ 24ರಂದು ತಿಂಡಿ, ಚಿಕನ್ ಕೊಡಿಸುವುದಾಗಿ ನಂಬಿಸಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಬಾಲಕಿ ಹೆದರಿಕೊಂಡು ಯಾರ ಬಳಿಯೂ ವಿಚಾರ ತಿಳಿಸಿರಲಿಲ್ಲ. ಸ್ವಲ್ಪ ದಿನಗಳ ನಂತರ ಬಾಲಕಿ ಆರೋಗ್ಯ ಹದಗೆಟ್ಟಿದೆ. ರಕ್ತ ಪರೀಕ್ಷೆ ಮಾಡಿಸಿದಾಗ ಬಾಲಕಿ ಘಟನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ.

ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂ.ಬಿ.ನವೀನ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಬಸವರಾಜ ವಿರುದ್ಧ ಆರೋಪ ಸಾಬೀತಾಗಿದ್ದು, ಶಿಕ್ಷೆ ವಿಧಿಸಲಾಗಿದೆ.

ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹8 ಲಕ್ಷ, ದಂಡದ ಹಣ ₹1 ಲಕ್ಷ ಸೇರಿ ಒಟ್ಟು ₹9 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ಸದರಿ ಪ್ರಕರಣದಲ್ಲಿ ಬಾಲಕಿ ಪರವಾಗಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.