ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ತನಿಖೆಯಲ್ಲಿ ಲೋಪ: ನ್ಯಾಯಾಧೀಶೆ ಕೆ.ಬಿ.ಗೀತಾ

Published 21 ಅಕ್ಟೋಬರ್ 2023, 15:27 IST
Last Updated 21 ಅಕ್ಟೋಬರ್ 2023, 15:27 IST
ಅಕ್ಷರ ಗಾತ್ರ

ತುಮಕೂರು: ಪ್ರಸಕ್ತ ವರ್ಷ ದೇಶದಲ್ಲಿ ಒಟ್ಟು 189 ಜನ ಪೊಲೀಸ್‌ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಜಿಲ್ಲೆಯ ಒಬ್ಬರು ಸೇರಿದಂತೆ ರಾಜ್ಯದ 16 ಜನ ಮಂದಿ ಇದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೊಲೀಸರು ಜನರ ಜತೆ ತಾಳ್ಮೆಯಿಂದ ವರ್ತಿಸಬೇಕು. ನಂತರ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೀವ ಪಣಕ್ಕಿಟ್ಟು ಹಲವು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುತ್ತಾರೆ. ಆದರೆ ಕೆಲವು ತನಿಖೆಗಳು ಕಾನೂನಿನ ಚೌಕಟ್ಟಿನಲ್ಲಿ ಇರುವುದಿಲ್ಲ. ಆದರೂ ಸುಮ್ಮನೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುತ್ತಾರೆ. ಇದರಿಂದ ಏನು ಪ್ರಯೋಜನವಾಗುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಯಬೇಕು ಎಂದರು.

ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಪೊಲೀಸರ ಹೆಸರನ್ನು ಓದದೇ ಇರುವ ದಿನ ಬಂದಾಗ ನಮ್ಮ ದೇಶ ರಾಮ ರಾಜ್ಯವಾಗುತ್ತದೆ. ರಾಜ್ಯದ ಪೊಲೀಸರಿಗೆ ದೇಶದಲ್ಲೇ ಉತ್ತಮ ಹೆಸರಿದೆ. ಇದು ಹೆಮ್ಮೆಯ ಸಂಗತಿ. ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆಗಳಿಗೆ ಅನುವು ಮಾಡಿಕೊಡುತ್ತಿದ್ದೇವೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಜಗತ್ತಿನಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಪ್ರಸಕ್ತ ವರ್ಷದಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ 189 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಯ ಹೆಸರು ಓದಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ವಿ.ಮರಿಯಪ್ಪ, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಡಿವೈಎಸ್‌ಪಿ ಚಂದ್ರಶೇಖರ್‌, ಕೆಎಸ್‍ಆರ್‌ಪಿ ಡೆಪ್ಯುಟಿ ಕಮಾಂಡೆಂಟ್‌ ಸೂರ್ಯನಾರಾಯಣ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT