ಈ ಭಾಗದ ಕೆಲ ಪ್ರಭಾವಿಗಳು ರೈತರಿಂದ ನೂರಾರು ಎಕರೆ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಜಮೀನಿನಲ್ಲಿ ಕೆಲಸ ಮಾಡಲು ಕರೆ ತಂದಿದ್ದರು. ‘ಅಗತ್ಯ ಸೌಲಭ್ಯ, ಕೂಲಿ ಹಣ ಕೊಡದೆ ದುಡಿಸಿ ಕೊಳ್ಳಲಾಗುತ್ತಿದೆ. ಕೆಲಸದ ಸ್ಥಳದಿಂದ ಹೊರ ಹೋಗಲು ಬಿಡುತ್ತಿಲ್ಲ. ಪ್ರಶ್ನೆ ಮಾಡಿದರೆ ಹಲ್ಲೆ ಮಾಡುತ್ತಿದ್ದಾರೆ’ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ.