ಕೆಲಸದ ಒತ್ತಡದಲ್ಲಿ ಆರೋಗ್ಯ ಉಪೇಕ್ಷೆ ಬೇಡ

7
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಸಲಹೆ

ಕೆಲಸದ ಒತ್ತಡದಲ್ಲಿ ಆರೋಗ್ಯ ಉಪೇಕ್ಷೆ ಬೇಡ

Published:
Updated:
Deccan Herald

ತುಮಕೂರು: ‘ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ತಮ್ಮ ಆರೋಗ್ಯ ಸಂರಕ್ಷಣೆ ಬಗ್ಗೆ ಉಪೇಕ್ಷೆ ಮಾಡಬಾರದು. ಮಾನಸಿಕ ಮತ್ತು ದೈಹಿಕ ಸದೃಢತೆ ಕಾಪಾಡಿಕೊಂಡು ಹೋಗಲು ಹೆಚ್ಚಿನ ಗಮನಹರಿಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಹೇಳಿದರು.

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್‌ಗಳನ್ನು ಹಾಡಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

‘ಕರ್ನಾಟಕ ಪೊಲೀಸರು ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವಲ್ಲಿ ಇತರೆ ರಾಜ್ಯಗಳ ಪೊಲೀಸರಿಗಿಂತ ಮಂಚೂಣಿಯಲ್ಲಿದ್ದಾರೆ. ಹಾಗಾಗಿ, ನಮ್ಮ ರಾಜ್ಯದ ಪೊಲೀಸರ ಸೇವೆ ಬೇರೆ ರಾಜ್ಯಗಳ ಪೊಲೀಸರಿಗೆ ಮಾದರಿಯಾಗಿದೆ’ ಎಂದು ಹೇಳಿದರು.

'ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಬದುಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾನು ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಿದ್ದು, ನಾನು ಕಂಡಂತೆ ನಮ್ಮ ರಾಜ್ಯದ ಪೊಲೀಸರು ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿದ್ದಾರೆ' ಎಂದು ನುಡಿದರು.

'ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು' ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ‘ದಿನದ 24 ಗಂಟೆಯೂ ಸಾರ್ವಜನಿಕರ ಸುರಕ್ಷತೆ ಬಗ್ಗೆಯೇ ಕಾರ್ಯನಿರತವಾಗಿರುವ ಪೊಲೀಸರ ಸೇವಾ ಕಾರ್ಯ ಇತರೆ ಇಲಾಖೆಗಳಿಗೂ ಮಾದರಿಯಾಗಿದೆ’ ಎಂದರು.

ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್, ‘ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಹಳ ಒತ್ತಡದಿಂದಲೇ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ, ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಕ್ರೀಡಾಕೂಟ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

ತುಮಕೂರು ನಗರ ಡಿಎಸ್ಪಿ ಕೆ.ಎಸ್.ನಾಗರಾಜ್‌ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !