ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಸಂಸ್ಕೃತಿಗಳ ಮೇಲೆ ಗೌರವವಿಲ್ಲ: ಡಿ.ಕೆ.ಶಿವಕುಮಾರ್

Last Updated 17 ಜನವರಿ 2021, 10:40 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಸಂಸ್ಕೃತಿಗಳು ಮತ್ತು ಭಾಷೆಗಳ ಬಗ್ಗೆ ಗೌರವವಿಲ್ಲ. ನಮ್ಮ ಸಂಸದರು ಸಹ ಅಧಿಕಾರಕ್ಕಾಗಿ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ವೈಯಕ್ತಿಕ ಅಜೆಂಡಾಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಯುತ್ತಿವೆ. ‌ಸಾರ್ವಜನಿಕರ ಅಭಿಪ್ರಾಯದಂತೆ ನಡೆಯುತ್ತಿಲ್ಲ’ ಎಂದರು.

ದೆಹಲಿಯ ರೈತ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಪಕ್ಷವು ಜ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಿಂದ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರ ರೈತರಿಗೆ ಮರಣ ಶಾಸನವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಿದೆ. ಇಲ್ಲಿಯವರೆಗೆ ಇಡೀ ರಾಷ್ಟ್ರದಲ್ಲಿಯೇ ಇಂತಹ ರೈತ ಹೋರಾಟಗಳು ನಡೆದಿರಲಿಲ್ಲ ಎಂದು ಹೇಳಿದರು.

ಸರ್ಕಾರಕ್ಕೆ ಜನರ ಬಗ್ಗೆ ಆಸಕ್ತಿ ಇಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ಜರುಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್‌ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. ಈ ಎಲ್ಲ ವಿಚಾರಗಳನ್ನು ಇಟ್ಟುಕೊಂಡು ಸರ್ಕಾರ ಮತ್ತು ದೇಶದ ಜನರನ್ನು ಗಮನ ಸೆಳೆಯಬೇಕಾಗಿದೆ ಎಂದರು.

ಕಾಂಗ್ರೆಸ್ ಪಕ್ಷವನ್ನು ಯಾರು ಏನು ಮಾಡುವುದಕ್ಕೂ ಸಾಧ್ಯವಿಲ್ಲ. 2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕುಟುಂಬದಲ್ಲಿ ನಡೆಯುವ ‌‌ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವಂತೆ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಆಮಂತ್ರಣ ನೀಡಲು ಭೇಟಿ ನೀಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT