ಮಂಗಳವಾರ, ಅಕ್ಟೋಬರ್ 20, 2020
21 °C
ಹಾಥರಸ್‌ ಘಟನೆಗೆ ಖಂಡನೆ; ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರತಿಭಟನೆ

‘ಪಿಎಫ್‌ಐ ವಿರುದ್ಧ ದ್ವೇಷದ ರಾಜಕಾರಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ಉತ್ತರ ಪ್ರದೇಶ ರಾಜ್ಯ ಸರ್ಕಾರ ದ್ವೇಷದ ಅಭಿಯಾನ ನಡೆಸುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಪಿಎಫ್‌ಐ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಮುಂ ದೆ ಜಮಾಯಿಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಹಾಥರಸ್ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ. ಜನರ ಗಮನ ಬೇರೆಡೆಗೆ ಸೆಳೆಯುವ ಸಲುವಾಗಿ ಪಿಎಫ್‌ಐ ವಿರುದ್ಧ ಹೊಸ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇರಲಿಲ್ಲ. ಈಗ ದಲಿತರು ಮತ್ತು ಮಹಿಳೆಯರಿಗೂ ರಕ್ಷಣೆ ಇಲ್ಲ ಎಂದು ಆರೋಪಿಸಿದರು.

ಪಿಎಫ್‌ಐ ಈ ನೆಲದ ಕಾನೂನನ್ನು ಗೌರವಿಸುತ್ತ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ನಂಬಿಕೆ ಇಟ್ಟಿರುವ ಸಂಘಟನೆ. ಸಂಘಟನೆಯು ನಡೆಸಿಕೊಂಡು ಬಂದಿರುವ ಕಾನೂನಾತ್ಮಕ ಹೋರಾಟಗಳುಇದನ್ನು ಸಾಬೀತುಪಡಿಸು ತ್ತಿವೆ. ಆಧಾರರಹಿತ ಆರೋಪಗಳ ಮೂಲಕ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರು ನಮ್ಮ ಸಂಘಟನೆಯನ್ನು ಬೇಟೆ ಆಡುವುದಕ್ಕೆ ಮುಂದಾಗಿದ್ದಾರೆ ಎಂದು ಪಿಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ರೆಹಾನ್ ಖಾನ್ ಆರೋಪಿಸಿದರು.

ಹಾಥರಸ್ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸಲು ಮತ್ತು ಘಟನೆಯ ಸತ್ಯವನ್ನು ಜನರು ತಿಳಿಯಲು ಪ್ರಕರಣವನ್ನು ಸುಪ್ರೀಂಕೋರ್ಟ್‍ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು ಎಂದು ರಾಷ್ಟ್ರಪತಿ ಅವರನ್ನು ಕೋರಿದರು.

ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯದರ್ಶಿ ವಸೀಮ್ ಇದ್ರೀಸ್, ಚಾಂದ್ ಪಾಷಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.