ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೋಷಣ್’ ರಥಯಾತ್ರೆಗೆ ಚಾಲನೆ

Last Updated 15 ಸೆಪ್ಟೆಂಬರ್ 2020, 16:33 IST
ಅಕ್ಷರ ಗಾತ್ರ

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆಚರಿಸುತ್ತಿರುವ ‘ರಾಷ್ಟ್ರೀಯ ಪೋಷಣ್ ಮಾಸಾಚರಣೆ’ ಹಮ್ಮಿಕೊಂಡಿದೆ. ಅರಿವು ಮೂಡಿಸಲು ಹಮ್ಮಿಕೊಂಡಿರುವ ‘ಪೋಷಣ್ ರಥ’ಯಾತ್ರೆಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಮಂಗಳವಾರ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕಾರ್ಯಾಲಯ ಮುಂಭಾಗದಲ್ಲಿ ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಮಾತನಾಡಿ, ‘ಕೋವಿಡ್-19ರ ಕಾರಣದಿಂದಾಗಿ ಅಪೌಷ್ಟಿಕತೆ ಹೋಗಲಾಡಿಸಲು ಡಿಜಿಟಲ್ ವಿಧಾನದ ಮೂಲಕ ಜನರಲ್ಲಿ ಜನಜಾಗೃತಿ ಮೂಡಿಸಲು ರಥಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ‘ಅಪೌಷ್ಟಿಕತೆ ಹೋಗಲಾಡಿಸಲು ಗರ್ಭಿಣಿ, ಬಾಣಂತಿಯರ ಆರೈಕೆಯು ಬಹು ಮುಖ್ಯ. ಸರ್ಕಾರವು ನೀಡುತ್ತಿರುವಪೌಷ್ಟಿಕ ಆಹಾರವನ್ನು ಫಲಾನುಭವಿಗಳು ತಪ್ಪದೆನಿಯಮ ಬದ್ಧವಾಗಿ ಸೇವಿಸುವುದರಿಂದಅಪೌಷ್ಟಿಕತೆ ಹೋಗಲಾಡಿಸಲು ಸಾಧ್ಯ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದ ನರಸಿಂಹಮೂರ್ತಿ, ‘ಪ್ರಸ್ತುತ ದೇಶದಲ್ಲಿ ಲಕ್ಷಾಂತರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ‘ಅಂಗನವಾಡಿಗಳಲ್ಲಿ ದಾಖಲಾಗುವ ಮಕ್ಕಳು, ಗರ್ಭಿಣಿ, ಬಾಣಂತಿಯರಲ್ಲಿರುವ ಅಪೌಷ್ಟಿಕತೆ ಪತ್ತೆ ಹಚ್ಚಲು ಸರ್ಕಾರದಿಂದ ಪರಿಕರಗಳನ್ನು ಈಗಾಗಲೇ ಒದಗಿಸಲಾಗಿದೆ. ಅದನ್ನು ಸಮರ್ಪಕವಾಗಿ ಬಳಸುವುದರಿಂದಅಪೌಷ್ಟಿಕತೆ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ನಿರೂಪಣಾಧಿಕಾರಿ ಎಂ.ಎಸ್.ಶ್ರೀಧರ್, ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಶಿವಕುಮಾರಯ್ಯ, ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೈರಾರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT