ಶುಕ್ರವಾರ, ಆಗಸ್ಟ್ 19, 2022
27 °C

26 ಪಂಚಾಯಿತಿಗಳಲ್ಲಿ ಬಿಜೆಪಿಗೆ ಅಧಿಕಾರ: ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ‘ತಾಲ್ಲೂಕಿನ 26 ಪಂಚಾಯಿತಿಗಳನ್ನು ಬಿಜೆಪಿ ನೇತೃತ್ವದಲ್ಲಿ ಅಧಿಕಾರ ಹಿಡಿಯಲು ನಿರ್ಧರಿ
ಸಿದ್ದು, ಬಿಜೆಪಿಗೆ ಬೆಂಬಲವಾಗಿ ಕಾರ್ಯಕರ್ತನಾಗಿ ದುಡಿಯುತ್ತೇನೆ’ ಎಂದು ಮುಖಂಡ ಲೋಕೇಶ್ವರ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಒಡೆದ ಮನೆಯಾಗಿದೆ. ಜೆಡಿಎಸ್ ಅಸ್ತಿತ್ವದಲ್ಲಿ ಇಲ್ಲ
ದಂತಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಮತ ಕೇಳಲಿದ್ದೇವೆ. ತಾಲ್ಲೂಕಿನ ಎಲ್ಲ ಪಂಚಾಯಿತಿಗಳನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಾಗುವುದು’ ಎಂದರು.

ಚುನಾವಣೆ ಬಹಿಷ್ಕರಿಸಿರುವ ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಹೊರಗುಳಿ
ಯಲಿದೆ. ಆದರೆ ಅನೇಕ ವರ್ಷಗಳಿಂದಲೂ ನೀರಿಲ್ಲದೆ ಇಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. 2010ರಲ್ಲಿ
ಹಣ ಮಂಜೂರಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗೆ ₹36 ಕೋಟಿ ಸಿದ್ಧವಾಗಿದ್ದು ಹೋರಾಟಗಳು ನಡೆದರೆ ನೀರು ಬರಲಿದೆ.  ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಳಿನಿಯೋಗ ಕರೆದೊಯ್ದು ಮನವಿ ಮಾಡಲಾಗುವುದು. ಮುಂದಿನ ಮಳೆಗಾಲದ ಒಳಗಾಗಿ ಹೊನ್ನವಳ್ಳಿ ಕೆರೆಗೆ ನೀರು ಹರಿಸಲು ಪ್ರಯತ್ನಿಸಲಾಗುವುದು ಎಂದರು.

ನಗರಸಭೆ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಭಾರತಿ, ಜಯರಾಂ, ನಯೀಮ್, ಮುನ್ನಾ, ಮುಖಂಡರಾದ ಧರಣೀಶ್, ರಾಜಶೇಖರ್, ಆಲದಹಳ್ಳಿ ಹರೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು