ಗುಬ್ಬಿ: ತಾಲ್ಲೂಕಿನ ನಿಟ್ಟೂರಿನ ಡಿಜಿಟಲ್ ಗ್ರಂಥಾಲಯಕ್ಕೆ ಪಿಡಿಒ ತಾತ್ಕಾಲಿಕವಾಗಿ ಸಿಬ್ಬಂದಿಯನ್ನು ನೇಮಿಸಿದ್ದು, ಮಂಗಳವಾರದಿಂದ ಗ್ರಂಥಾಲಯದ ಬಾಗಿಲು ತೆರೆಯಲಾಗಿದೆ.

ಗ್ರಂಥಾಲಯಕ್ಕೆ ಏಳು ತಿಂಗಳಿನಿಂದ ಬೀಗ ಹಾಕಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

ವರದಿ ಗಮನಿಸಿದ ನ್ಯಾಯಾಧೀಶೆ ಅನುಪಮಾ ಡಿ. ನಿಟ್ಟೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ತಕ್ಷಣ ಗ್ರಂಥಾಲಯ ತೆರೆಯುವಂತೆ ಎಚ್ಚರಿಕೆ ಕೊಟ್ಟಿದ್ದರು.

ಹಲವು ತಿಂಗಳುಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೂ ಅಧಿಕಾರಿಗಳು ಗಮನಹರಿಸಿರಲಿಲ್ಲ. ವರದಿ ನಂತರ ಎಚ್ಚೆತ್ತ ಅಧಿಕಾರಿಗಳು ಸಾರ್ವಜನಿಕರಿಗೆ ಗ್ರಂಥಾಲಯ ಲಭ್ಯವಾಗುವಂತೆ ಮಾಡಿರುವುದರಿಂದ ಅನುಕೂಲವಾಗಿದೆ ಎಂದು ಓದುಗ ಚಂದನ್ ಹೇಳಿದರು.

ಗ್ರಂಥಾಲಯ ತೆರೆದು ಪುಸ್ತಕ ಓದಲು ಅನುವು ಮಾಡಿಕೊಟ್ಟಿರುವುದರಿಂದ ಸಂತೋಷವಾಗಿದೆ ಎಂದು ವಿದ್ಯಾರ್ಥಿನಿ ರಶ್ಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.