ಮಕ್ಕಳು ಜಾಗತಿಕ ಸ್ಪರ್ಧೆಗೆ ಸಜ್ಜುಗೊಳ್ಳಲಿ

7
ವಿದ್ಯಾರ್ಥಿ ವಸತಿ ನಿಲಯಗಳ ವಿದ್ಯಾರ್ಥಿಗಳು ಮತ್ತು ನೌಕರರಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ಮುದ್ದಹನುಮೇಗೌಡ ಆಶಯ

ಮಕ್ಕಳು ಜಾಗತಿಕ ಸ್ಪರ್ಧೆಗೆ ಸಜ್ಜುಗೊಳ್ಳಲಿ

Published:
Updated:
Deccan Herald

ತುಮಕೂರು: ‘ಜಾಗತಿಕ ಮಟ್ಟದ ಸವಾಲುಗಳನ್ನು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಬೇಕು’ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಮತ್ತು ನೌಕರರಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಲಾಖೆಗಳ ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸಮಾಜ ಮುಖ್ಯವಾಹಿನಿಗೆ ಬಂದು ಭವಿಷ್ಯ ರೂಪಿಸಿಕೊಳ್ಳಬೇಕು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಏಳಿಗೆ ಸಾಧಿಸಬೇಕು. ಆಗ ಇಂತಹ ಶಾಲೆಯ ಆಶಯ ಸಾಕಾರಗೊಳ್ಳುತ್ತದೆ ಎಂದು ಹೇಳಿದರು.

ಇಲಾಖೆಗಳ ಕೆಲ ವಿದ್ಯಾರ್ಥಿ ವಸತಿ ಶಾಲೆಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳನ್ನು ಮೀರಿಸುವ ರೀತಿ ಅಚ್ಚುಕಟ್ಟಾಗಿ ಇವೆ. ಅಲ್ಲಿನ ಮಕ್ಕಳು ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

‘ಪೋಷಕರು ಇಲಾಖೆ ಅಧಿಕಾರಿಗಳು, ನಿಲಯ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಮೇಲೆ ಭರವಸೆ ಇಟ್ಟು ಮಕ್ಕಳನ್ನು ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಬಿಟ್ಟಿರುತ್ತಾರೆ. ಆ ಮಕ್ಕಳನ್ನು ನಿಮ್ಮ ಮಕ್ಕಳಂತೆಯೇ ಪೋಷಿಸಿ ಆರೈಕೆ ಮಾಡಿ ಸನ್ಮಾರ್ಗ ತೋರಬೇಕು. ಈಗಾಗಲೇ ಇಂತಹ ಕೆಲಸ ಮಾಡುತ್ತಿದ್ದು, ಇದು ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜ್ ಮಾತನಾಡಿ, ‘ಬಡವರು, ದೀನ,ದಲಿತರ ಮಕ್ಕಳು ಬಹಳ ನಿರೀಕ್ಷೆ ಇಟ್ಟುಕೊಂಡು ಬರುತ್ತಾರೆ. ಅವರ ಭವಿಷ್ಯ ರೂಪಿಸಲು ಶ್ರಮಿಸಬೇಕು. ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ನೌಕರರ, ಸಿಬ್ಬಂದಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಕಾರ್ಯಗಳು ಹೆಚ್ಚು ನಡೆಯಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಾಂಜನೇಯ, ತುಮಕೂರು ಜಿಲ್ಲಾ ವಸತಿ ಶಾಲಾ ನೌಕರರ ಸಂಘದ ಅಧ್ಯಕ್ಷ ಎ.ಬಿ.ಜಿತೇಂದ್ರ, ಜಿಲ್ಲಾ ನಿಲಯ ಮೇಲ್ವಿಚಾರಕರ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಪ್ಪ, ಜಿಲ್ಲಾ ಕ್ರೈಸ್ತ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಸಿ ಕೆ.ಎನ್.ಸತೀಶ್, ವಸತಿ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಜಿ.ಎನ್.ಜನಾರ್ಧನ್, ಜಿಲ್ಲಾ ನಿಲಯ ಮೇಲ್ವಿಚಾರಕರ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಚೆನ್ನರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಆರ್.ರಾಜಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಡಾ.ಸುಬ್ರಾ ನಾಯಕ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ರಂಗೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಮಂಜುನಾಥ್ ವೇದಿಕೆಯಲ್ಲಿದ್ದರು.

ತುಮಕೂರು ಜಿಲ್ಲಾ ಕ್ರೈಸ್ತ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಸ್ತೂರಿ ಕುಮಾರ ಸ್ವಾಗತಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !