ಶಿರಾ: ನಗರದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.

ನಗರದ ಜ್ಯೋತಿನಗರ ಬಡಾವಣೆಯಲ್ಲಿ ಇತ್ತೀಚೆಗೆ ₹ 5 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಶಿರಾ ನಗರ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ಯತೆ ಮೇರೆಗೆ ಮೂಲಸೌಕರ್ಯ ಒದಗಿಸಲಾಗುವುದು. ಕಾಮಗಾರಿಯ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜೀಯ ಪ್ರಶ್ನೆ ಇಲ್ಲ. ನಿಗದಿತ ಸಮಯದಲ್ಲಿ ಉತ್ತಮ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಉಗ್ರೇಶ್ ಮಾತನಾಡಿ, ನಗರಸಭೆ ವಾರ್ಡ್ ನಂ. 2 ಮತ್ತು 3ರಲ್ಲಿ ಉದ್ಯೋಗಸ್ಥರೇ ಹೆಚ್ಚು ಮಂದಿ ವಾಸವಾಗಿದ್ದಾರೆ. ಆದರೂ, ಮೂಲ ಸೌಕರ್ಯವಿಲ್ಲ. ಆದ್ದರಿಂದ ಶಾಸಕರು ಹೆಚ್ಚಿನ ಅನುದಾನವನ್ನು ಇಲ್ಲಿಗೆ ನೀಡಬೇಕು. ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಅಭಿವೃದ್ಧಿ ಕುಂಠಿತವಾಗಿದ್ದು ಶಾಸಕರು ಈ ಬಗ್ಗೆ ಎಚ್ಚರವಹಿಸಬೇಕು ಎಂದರು.

ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಎಂಜಿನಿಯರ್ ಶಾರದಾ, ಗೋಣಿಹಳ್ಳಿ ದೇವರಾಜು, ಸುರೇಶ್, ಪುಟ್ಟಸಿದ್ದ ಯಾದವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.