ಪಾವಗಡ: ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಗೋಕಾಕ್ ತಾಲ್ಲೂಕು, ಬೆಳಗಾವಿ ಹಾಗೂ ಕೇರಳದ ಪ್ರವಾಹ ಪೀಡಿತ ಪ್ರದೇಶಕ್ಕೆ ಕಳುಹಿಸಲು ಪರಿಹಾರ ಕಿಟ್‌ಗಳನ್ನು ಶನಿವಾರ ಸಿದ್ಧಪಡಿಸಲಾಗಿದೆ..

ಸ್ವಾಮಿ ಜಪಾನಂದ ಜಿ ಮಾತನಾಡಿ, ಗೋಕಾಕ್, ಬೆಳಗಾವಿ ಪ್ರವಾಹ ಪರಿಹಾರ ಯೋಜನೆಗೆ ಸುಮಾರು ಐದು ಸಾವಿರ ಕುಟುಂಬಗಳಿಗೆ ಟಾರ್ಪಾಲ್, ಅಕ್ಕಿ, ಬೇಳೆ, ಸಕ್ಕರೆ, ರವೆ, ಗೋಧಿ ಹಿಟ್ಟು, ಸಾಂಬಾರ್ ಪದಾರ್ಥ, ಸೀರೆ, ಹೊದಿಕೆ, ಪಂಚೆ, ಟವೆಲ್ ಒಳಗೊಂಡ ಕಿಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ. ಮೊದಲನೇ ಹಂತದಲ್ಲಿ ಸಾವಿರ ಕಿಟ್ ಸಿದ್ಧಪಡಿಸಲಾಗಿದೆ ಎಂದರು.

ಕೇರಳದ ವಯನಾಡ್ ಪ್ರದೇಶದ ಐದು ಸಾವಿರ ಕುಟುಂಬಗಳಿಗೆ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. 65 ಮಂದಿ ಸಂತ್ರಸ್ತರಿಗೆ ಆಶ್ರಯ ನೀಡಿದ ಶಾಲೆ ಸಂಪೂರ್ಣ ನೆಲಸಮಗೊಂಡಿದೆ. ಸಂತ್ರಸ್ತರೂ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಪ್ರದೇಶದಲ್ಲಿ ಶಾಲೆಯನ್ನು ನೂತನವಾಗಿ ನಿರ್ಮಿಸಲಾಗುವುದು ಎಂದರು.

ಕೆಲವೇ ದಿನಗಳಲ್ಲಿ ಪರಿಹಾರ ಸಾಮಗ್ರಿಗಳೊಂದಿಗೆ ಪ್ರವಾಹ ಪ್ರದೇಶಗಳಿಗೆ ಸ್ವಯಂ ಸೇವಕರೊಂದಿಗೆ ಹೋಗಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.