ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ವಿಧಾನಸಭೆ ಉಪಚುನಾವಣೆ: ಶಾಂತಿಯುತ ಮತದಾನಕ್ಕೆ ‌ಸಿದ್ಧತೆ

Last Updated 3 ನವೆಂಬರ್ 2020, 3:11 IST
ಅಕ್ಷರ ಗಾತ್ರ

ಶಿರಾ: ಶಿರಾ ವಿಧಾನಸಭೆ ಉಪಚುನಾವಣೆಯ ಮತದಾನ ಮಂಗಳವಾರ ನಡೆಯಲಿದೆ.

ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಕೈಗೊಂಡಿದೆ. ಮತದಾನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಅಗತ್ಯ ಸಾಮಗ್ರಿಗಳೊಂದಿಗೆ ಮತಗಟ್ಟೆಗೆ ತೆರಳಿದ್ದಾರೆ.

ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಮಸ್ಟರಿಂಗ್ ಕೇಂದ್ರ ತೆರೆಯಲಾಗಿದೆ. ಅಲ್ಲಿ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್, ಆರೋಗ್ಯ ತಪಾಸಣೆ ನಡೆಸಿದ ನಂತರ ಮತಯಂತ್ರ ಮತ್ತು ವಿವಿಧ ಸಾಮಗ್ರಿಗಳನ್ನು ನೀಡಿ ಮತಗಟ್ಟೆಗೆ ಕಳುಹಿಸಲಾಯಿತು.

ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಚುನಾವಣಾಧಿಕಾರಿ ನಂದಿನಿದೇವಿ ಅವರ ಮಾರ್ಗದರ್ಶನದಡಿ ಸಕಲ ‌ಸಿದ್ಧತೆಕೈಗೊಳ್ಳಲಾಗಿದೆ.ಚುನಾವಣೆ ಕಾರ್ಯಕ್ಕೆ ತುಮಕೂರು ಮತ್ತು ಗುಬ್ಬಿ ತಾಲ್ಲೂಕಿನಿಂದ ಬಂದಿದ್ದ ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರದಲ್ಲಿ ಅಗತ್ಯ ಸಾಮಗ್ರಿಗಳನ್ನು ಪಡೆದು ಮತಗಟ್ಟೆಗೆ ತೆರಳಿದರು. ಒಟ್ಟು 15 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಗಿಭದ್ರತೆ: ಮತದಾನ ಶಾಂತ ರೀತಿಯಿಂದ ನಡೆಯಲು ಅನುಕೂಲವಾಗುವಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಬ್ಬರು ಡಿವೈಎಸ್‌ಪಿ, 5 ಮಂದಿ ಇನ್‌ಸ್ಪೆಕ್ಟರ್, 21 ಪಿಎಸ್ಐ, 19 ಎಎಸ್ಐ, 900ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT