ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ವರದಿ ಪರಿಣಾಮ: ಕೊಡಿಗೇನಹಳ್ಳಿಯಲ್ಲಿ ಕಾಲೇಜು ಆರಂಭಕ್ಕೆ ಸ್ಥಳ ಪರಿಶೀಲನೆ

Published 11 ಮಾರ್ಚ್ 2024, 13:35 IST
Last Updated 11 ಮಾರ್ಚ್ 2024, 13:35 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಕೊಡಿಗೇನಹಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಸೋಮವಾರ ಕಾಲೇಜು ಶಿಕ್ಷಣ ಇಲಾಖೆಯ ಬೆಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕ ರಾಮಕೃಷ್ಣರೆಡ್ಡಿ ತಂಡದಿಂದ ಸ್ಥಳ ಪರಿಶೀಲನೆ ನಡೆಯಿತು.

ಕೊಡಿಗೇನಹಳ್ಳಿಯಲ್ಲಿ ಕಾಲೇಜಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ದೂರದ ಪಟ್ಟಣಗಳಿಗೆ ಅಲೆದಾಡುತ್ತಿದ್ದಾರೆ ಎಂದು ಈಚೆಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಇದಕ್ಕೆ ಸ್ಪಂದಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ನಾನು ಇಲ್ಲಿ ಪ್ರಥಮ ದರ್ಜೆ ಕಾಲೇಜು ಇದೆ ಎಂದು ತಿಳಿದಿದ್ದೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಕಾಲೇಜು ಇಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ದೂರದ ಪಟ್ಟಣದತ್ತ ಹೋಗಿ ಬರುತ್ತಿರುವ ವಿಚಾರ ತಿಳಿದು ಬೇಸರವಾಯಿತು. ಹಾಗಾಗಿ ಮುಂದಿನ ವರ್ಷವೇ ಕೊಡಿಗೇನಹಳ್ಳಿಯಲ್ಲಿ ಕಾಲೇಜು ಆರಂಭಿಸುತ್ತೇನೆ’ ಎಂದು ಹೇಳಿ ಶಿಕ್ಷಣಮಂತ್ರಿಗೂಪತ್ರ ಬರೆದಿದ್ದರು.

ಬೆಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕ ರಾಮಕೃಷ್ಣರೆಡ್ಡಿ ಮಾತನಾಡಿ, ‘ಶಿಕ್ಷಣ ಸಚಿವರ ಆದೇಶದಂತೆ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಶಾಲೆಯಲ್ಲಿನ ಕೊಠಡಿ ಮತ್ತು ಮೂಲಸೌಕರ್ಯಗಳ ಜತೆಗೆ ಈ ವರ್ಷವೇ ಕಾಲೇಜು ಆರಂಭಿಸುವುದಕ್ಕೆ ಸರ್ಕಾರಕ್ಕೆ ವರದಿ ನೀಡುತ್ತೇವೆ. ನಂತರ ಕಾಲೇಜಿಗೆ ಸ್ವಂತ ಕಟ್ಟಡ ಮತ್ತು ಮೂಲಸೌಲಭ್ಯದ ಬಗ್ಗೆ ಸಹಕಾರ ಸಚಿವರು ನೋಡಿಕೊಳ್ಳುತ್ತಾರೆ’ ಎಂದರು.

ಶಿಕ್ಷಣ ಇಲಾಖೆ ವಿಶೇಷಾಧಿಕಾರಿಕೆ.ಸಿ. ಬಸವರಾಜು, ಶ್ರೀಕಾಂತ್, ಶಿವಪ್ರಸಾದ್, ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಾಳಪ್ಪ, ಸಹಾಯಕ ಪ್ರಾಧ್ಯಾಪಕ ಮುರಳಿಧರ್, ಬಿ.ಮಂಜುನಾಥ್, ಮುಖ್ಯ ಶಿಕ್ಷಕಿ ಯಶೋದಮ್ಮ, ಪ್ರೂಟ್ ಕೃಷ್ಣ, ಶ್ರೀನಿವಾಸ್, ರಾಜಪ್ಪ, ಶ್ರೀನಿವಾಸಮೂರ್ತಿ, ಕೆವಿ.ವೆಂಕಟೇಶ್, ತೆರಿಯೂರು ಚಂದ್ರಶೇಖರ್, ಕಸಿನಾಯಕನಹಳ್ಳಿ ಸುನಿಲ್ ಇದ್ದರು.

11.03.24 TMK-KOD-1 ಕೊಡಿಗೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಸೋಮವಾರ ಸ್ಥಳ ಪರಿಶೀಲಿಸಿದ ಬೆಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕ ಹಾಗೂ ತುಮಕೂರು-ಮಧುಗಿರಿ ಶಿಕ್ಷಣ ಇಲಾಖಾಧಿಕಾರಿಗಳು.
11.03.24 TMK-KOD-1 ಕೊಡಿಗೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಸೋಮವಾರ ಸ್ಥಳ ಪರಿಶೀಲಿಸಿದ ಬೆಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕ ಹಾಗೂ ತುಮಕೂರು-ಮಧುಗಿರಿ ಶಿಕ್ಷಣ ಇಲಾಖಾಧಿಕಾರಿಗಳು.
11.03.24 TMK-KOD-3 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಕ್ಕೆ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನ.
11.03.24 TMK-KOD-3 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಕ್ಕೆ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT