ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ತಡೆ; ಜಾಗೃತಿ ಮೂಡಿಸಿ

ನಾಗವಲ್ಲಿ ಗ್ರಾಮದಲ್ಲಿ ಪೋಷಣ್ ಅಭಿಯಾನ
Last Updated 30 ಸೆಪ್ಟೆಂಬರ್ 2020, 16:41 IST
ಅಕ್ಷರ ಗಾತ್ರ

ತುಮಕೂರು: ಅಪೌಷ್ಟಿಕತೆ ತಡೆ ಬಗ್ಗೆ ಇಲಾಖೆ, ಸಂಘ ಸಂಸ್ಥೆಗಳು ಹಾಗೂ ಪ್ರಜ್ಞಾವಂತರು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಸಲಹೆ ನೀಡಿದರು.

ತಾಲ್ಲೂಕಿನ ನಾಗವಲ್ಲಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ವಿರುಲಿನಾ ಫೌಂಡೇಷನ್ ಸಹಯೋಗದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೌಷ್ಟಿಕ ಆಹಾರ ಸೇವಿಸುವಂತೆ ತಾಯಂದಿರಲ್ಲಿ ಅರಿವು ಮೂಡಿಸಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಲು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ವಿ.ಅಜಯ್, ‘ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ನೀಡಬೇಕು. ಸ್ವಚ್ಛತೆ ಹಾಗೂ ಅಪೌಷ್ಟಿಕತೆ ತಡೆಯಲು ಎಲ್ಲರೂ ಕೈ ಜೋಡಿಸಬೇಕು’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಸ್ಥಳೀಯವಾಗಿ ದೊರಕುವ ಹಣ್ಣು, ತರಕಾರಿಗಳು, ಮಳೆಗಾಲದಲ್ಲಿ ಹೊಲಗಳಲ್ಲಿ ಸಿಗುವ ಸೊಪ್ಪುಗಳ ಬಳಕೆ ಹಾಗೂ ಕೈತೋಟಗಳನ್ನು ಮನೆಯಲ್ಲಿ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ, ಎಂ.ಎಸ್.ಶ್ರೀಧರ್, ಸ್ಪಿರುಲಿನಾ ಫೌಂಡೇಷನ್‌ನ ಮಹೇಶ್ ಮಾತನಾಡಿದರು. ಪೋಷಣ್ ಅಭಿಯಾನದ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು. ಗಿಡ ನೆಡುವ ಕಾರ್ಯಕ್ರಮ, ಪೌಷ್ಟಿಕ ಆಹಾರ ಸಪ್ತಾಹ, ಜಾಗೃತಿ ಜಾಥಾ ನಡೆಯಿತು.

ತಾಲ್ಲೂಕು ಶಿಶು ಅಬಿವೃದ್ಧಿ ಯೋಜನಾಧಿಕಾರಿ ದಿನೇಶ್‍, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೈರಾರೆಡ್ಡಿ, ಶೈಲಾ ಕೆ.ಕಾರಿಗಿ, ಕಮಲಮ್ಮ, ರವಿಕುಮಾರ್, ಶಶಿಕುಮಾರ್ ಹಾಗೂ ಇಲಾಖೆಯ ಮೇಲ್ವಿಚಾರಕಿಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT