ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಸುರಕ್ಷತೆಗೆ ಆದ್ಯತೆ

ಕೋವಿಡ್‌ 3ನೇ ಅಲೆ ಎದುರಿಸಲು ಸಿದ್ಧತೆ: ಶಾಸಕ ಮಸಾಲ ಜಯರಾಂ
Last Updated 10 ಜೂನ್ 2021, 6:32 IST
ಅಕ್ಷರ ಗಾತ್ರ

ತುರುವೇಕೆರೆ: ಕೋವಿಡ್ ಮೂರನೇ ಅಲೆ ನಿಯಂತ್ರಣ ಕುರಿತಂತೆ ಶಾಸಕ ಮಸಾಲ ಜಯರಾಂ ನೇತೃತ್ವದಲ್ಲಿ ಪಟ್ಟಣದಲ್ಲಿ ಬುಧವಾರ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಶಾಸಕ ಜಯರಾಂ, ಸೋಂಕಿತರು ಮನೆ ಯಲ್ಲಿ ಚಿಕಿತ್ಸೆ ಪಡೆಯದೆ ಆರೈಕೆ ಕೇಂದ್ರಗಳಿಗೆ ದಾಖಲಾಗಿ. ಸೋಂಕಿತರು ಕೇರ್‌ ಸೆಂಟರ್‌ಗಳಿಗೆ ದಾಖಲಾಗಲು ಹಿಂದೇಟು ಹಾಕಿದರೆ, ಪೊಲೀಸ್ ಇಲಾ ಖೆಯ ಸಹಾಯ ಪಡೆದು ಆರೈಕೆ
ಕೇಂದ್ರಗಳಿಗೆ ದಾಖಲಿಸುವಂತೆ ಸೂಚಿಸಿದರು.

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಜ್ಞರ ಸಮಿತಿ ಹೇಳಿದೆ. ಮುಂಜಾಗೃತ ಕ್ರಮಕ್ಕಾಗಿ 200 ಆಮ್ಲಜನಕ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ತಾಲ್ಲೂಕಿನ ಕೋವಿಡ್ ಸೆಂಟರ್‌ನಲ್ಲಿ 235 ಸೋಂಕಿತರಿದ್ದಾರೆ. ಹೋಂ ಕ್ವಾರಂಟೈನ್‌ನಲ್ಲಿ 175 ಮಂದಿ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 113 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನಲ್ಲಿ ಶೇ 67ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ಲಸಿಕೆಯನ್ನು 2,657 ಜನರು ಪಡೆದಿದ್ದಾರೆ. ಏಪ್ರಿಲ್‌ನಿಂದ ಈವರೆಗೆ 43 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದರು.

ಲಾಕ್‌ಡೌನ್‌ನಲ್ಲಿ ಅನಗತ್ಯವಾಗಿ ಓಡಾಡಿದ 435 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ತಾಲ್ಲೂಕಿನಲ್ಲಿ ಹೈಡಲ್ ಬರ್ಗ್‌ ನಿಂದ ಆಮ್ಲಜನಕ ಪ್ಲಾಂಟ್ ನಿರ್ಮಿಸ ಲಾಗುತ್ತಿದೆ. ಶಾಸಕರ ಅನುದಾನದಲ್ಲಿ ಶಾಶ್ವತವಾದ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದರು

ತಹಶೀಲ್ದಾರ್ ನಯೀಂ ಉನ್ನೀಸಾ, ಡಿವೈಎಸ್‌ಪಿ ರಮೇಶ್, ಟಿಎಚ್‌ಒ ಡಾ.ಸುಪ್ರಿಯಾ, ವೈದ್ಯಾಧಿಕಾರಿ ಡಾ.ಶ್ರೀಧರ್, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT