ಶುಕ್ರವಾರ, ನವೆಂಬರ್ 22, 2019
23 °C

ಪ್ರವಾಹಪೀಡಿತ ಪ್ರದೇಶ ಶಾಲೆ ದುರಸ್ತಿಗೆ ಆದ್ಯತೆ; ಸುರೇಶ್‌ಕುಮಾರ್

Published:
Updated:

ತುಮಕೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶದ ಶಾಲಾ ಕಟ್ಟಡ ದುರಸ್ತಿ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷ ಶಾಲಾ ಆರಂಭ ದಿನವೇ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು. ಶಾಲೆ ಆರಂಭಗೊಂಡ ದಿನ ಅರ್ಥಪೂರ್ಣಗೊಳಿಸುವ ದಿಶೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಚಂದ್ರಯಾನ–2 ವಿಫಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್‌ಕುಮಾರ್, ‘ಜೆಡಿಎಸ್ ಮತ್ತು ಕಾಂಗ್ರೆಸ್‌ನವರು ಕೂಡಿ ಸರ್ಕಾರ ಮಾಡಿದವರು. ಸಿದ್ಧರಾಮಯ್ಯ ಅವರು ಮೂಢನಂಬಿಕೆ ವಿರುದ್ಧ ಕಾನೂನು ತಂದಿದ್ದಾರೆ. ಕುಮಾರಸ್ವಾಮಿಯವರು ಅದನ್ನು ಗಮನಿಸಬೇಕು’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)