ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿ ಮಲೆ ಸಂಪ್ರದಾಯ ರಕ್ಷಣೆ; ಅ. 22ರಂದು ಪ್ರತಿಭಟನೆ

Last Updated 20 ಅಕ್ಟೋಬರ್ 2018, 14:21 IST
ಅಕ್ಷರ ಗಾತ್ರ

ತುಮಕೂರು: ಶಬರಿಮಲೆಯ ಸಂಪ್ರದಾಯ ಮತ್ತು ಪರಂಪರೆಯನ್ನು ರಕ್ಷಿಸುವ ಸಲುವಾಗಿ ಜಿಲ್ಲಾ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ, ಹಿಂದೂಪರ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳೊಂದಿಗೆ ’ಶರಣ ಘೋಷ ಮಂತ್ರದೊಂದಿಗೆ’ ಸೋಮವಾರ (ಅ. 22) ಬೆಳಿಗ್ಗೆ 10.30ಕ್ಕೆ ನಗರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಟೌನ್‌ಹಾಲ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯೊಂದಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಇತ್ತೀಚೆಗೆ ಶಬರಿಮಲೆಯಲ್ಲಿ ಕೆಲವು ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸುವಲ್ಲಿ ಪೊಲೀಸರು ದೌರ್ಜನ್ಯ ಎಸಗಿ ಲಾಠಿ ಪ್ರಹಾರ ಮಾಡಿರುವುದನ್ನು ಖಂಡಿಸುತ್ತೇನೆ ಎಂದು ಆಗ್ರಹಿಸಿದರು.

ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಹಿಂದೂ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚಾರ ವಿಚಾರಗಳಿಗೆ ವಿರುದ್ಧವಾಗಿದ್ದು, ಇದರ ಮರುಪರುಶೀಲನೆಗೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂನ ಗುರುಪ್ರಕಾಶ್‌, ಬಸವರಾಜು ಹಾಗೂ ಜಿಲ್ಲಾ ಮಹಿಳಾ ಸಂಘಟನೆಯ ಜಂಟಿ ಕಾರ್ಯದರ್ಶಿ ನಾಗರತ್ನ ಮತ್ತು ಸುಜಾತ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT