ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಡಮ್‌ ಟುಸ್ಸಾಡ್ಸ್‌ನಲ್ಲಿ ವಿರಾಟ್‌ ಕೊಹ್ಲಿ ಮೇಣದ ‍ಮೂರ್ತಿ

Last Updated 28 ಮಾರ್ಚ್ 2018, 19:06 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿಷ್ಠಿತ ಮೇಡಮ್‌ ಟುಸ್ಸಾಡ್ಸ್‌ನ ನವದೆಹಲಿ ಶಾಖೆಯಲ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಮೇಣದ ಮೂರ್ತಿ ಶೀಘ್ರವೇ ಅನಾವರಣಗೊಳ್ಳಲಿದೆ.

ಲಂಡನ್‌ನಿಂದ ಬಂದಿದ್ದ ವಿಶ್ವ ಪ್ರಸಿದ್ಧ ಕಲಾವಿದರನ್ನು ಒಳಗೊಂಡ ತಂಡ ಬುಧವಾರ ಕೊಹ್ಲಿ ಅವರನ್ನು ಭೇಟಿ ಮಾಡಿ ಅವರ ದೇಹದ ಎಲ್ಲಾ ಅಂಗಗಳ ಅಳತೆ ತೆಗೆದುಕೊಂಡಿದೆ.

ಟುಸ್ಸಾಡ್ಸ್‌ ಕೇಂದ್ರದಲ್ಲಿ ಕ್ರಿಕೆಟ್‌ ದಿಗ್ಗಜರಾದ ಕಪಿಲ್‌ ದೇವ್‌, ಸಚಿನ್‌ ತೆಂಡೂಲ್ಕರ್‌, ಅರ್ಜೆಂಟೀನಾದ ಫುಟ್‌ಬಾಲ್‌ ಆಟಗಾರ ಲಯೊನೆಲ್‌ ಮೆಸ್ಸಿ ಅವರ ಮೇಣದ ಪ್ರತಿಮೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ.

2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಅಡಿ ಇಟ್ಟಿದ್ದ ಕೊಹ್ಲಿ, 2008ರಲ್ಲಿ 19 ವರ್ಷದೊಳಗಿನವರ ವಿಶ್ವಕಪ್‌ ಗೆದ್ದ ಭಾರತ ತಂಡದ ನಾಯಕರಾಗಿದ್ದರು.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಅವರು ಅರ್ಜುನ, ಐಸಿಸಿ ವಿಶ್ವದ ಶ್ರೇಷ್ಠ ಕ್ರಿಕೆಟಿಗ, ಬಿಸಿಸಿಐನಿಂದ ನೀಡುವ ವರ್ಷದ ಶ್ರೇಷ್ಠ ಆಟಗಾರ ಮತ್ತು ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

‌‘ಪ್ರತಿಷ್ಠಿತರ ಮೇಣದ ಪ್ರತಿಮೆಗಳಿಗೆ ಹೆಸರಾಗಿರುವ ಮೇಡಮ್‌ ಟುಸ್ಸಾಡ್ಸ್‌ನಲ್ಲಿ ಇನ್ನು ಮುಂದೆ ನನ್ನ ಮೂರ್ತಿಯೂ ಇರಲಿದೆ ಎಂಬುದು ಖುಷಿಯ ವಿಷಯ. ಇದು ನನಗೆ ಸಿಕ್ಕ ಅತ್ಯಂತ ದೊಡ್ಡ ಗೌರವ. ಇದಕ್ಕಾಗಿ ಟುಸ್ಸಾಡ್ಸ್‌ ತಂಡಕ್ಕೆ ಆಭಾರಿಯಾಗಿದ್ದೇನೆ’ ಎಂದು ಕೊಹ್ಲಿ ಖುಷಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT