ಕೇಂದ್ರ ಸರ್ಕಾರ ವೈಫಲ್ಯ ಖಂಡಿಸಿ ನಾಳೆ ಪ್ರತಿಭಟನೆ

7
ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಕಡಿತಗೊಳಿಸುವಂತೆ ಧರಣಿ

ಕೇಂದ್ರ ಸರ್ಕಾರ ವೈಫಲ್ಯ ಖಂಡಿಸಿ ನಾಳೆ ಪ್ರತಿಭಟನೆ

Published:
Updated:

ತುಮಕೂರು: ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಸೋಮವಾರ (ಸೆ. 10) ಬೆಳಿಗ್ಗೆ 11ಕ್ಕೆ ನಗರದ ಟೌನ್‌ಹಾಲ್‌ ವೃತ್ತದಿಂದ ತೆರಳಿ ಬಿಎಸ್‌ಎನ್‌ಎಲ್‌ ಕಚೇರಿ ಮುಂಭಾಗ ಧರಣಿ ಮಾಡಲಾಗುವುದು ಎಂದು ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಎಂ)ನ ಕಾರ್ಯದರ್ಶಿ ಸೈಯದ್‌ ಮುಜೀಬ್‌ ತಿಳಿಸಿದರು.

ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಕಮ್ಯೂನಿಸ್ಟ್‌ ಪಕ್ಷ, ಸೋಸಿಯಲಿಸ್ಟ್‌ ಯೂನಿಟ್‌ ಸೆಂಟರ್‌ ಆಫ್‌ ಇಂಡಿಯಾ (ಎಸ್‌ಯುಸಿಐ) ವತಿಯಿಂದ ಪ್ರತಿಭಟಿಸಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ಆರ್ಥಿಕ ಕುಸಿತದಿಂದ ಸಾಮಾನ್ಯ ಜನರು ನರಳುವಂತಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿದ್ದು, ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದರು.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನಾ ನೀಡದ ಭರವಸೆಗಳನ್ನು ಈಡೇರಿಸದೆ ಬರಿ ಪ್ರಚಾರದ ಆರ್ಭಟದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯನ್ನು ಕಡಿಮೆಗೊಳಿಸಲಾಗುವುದು, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಸೇರಿದಂತೆ ಹತ್ತು ಹಲವು ಭರವಸೆಯನ್ನು ನೀಡಿದ್ದರು. ಅವುಗಳನ್ನು ಈಡೇರಿಸದೆ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದಾದ್ಯಂತ ರೈತರು ಬೆಳೆ ಹಾನಿಗೆ ಪರಿಹಾರ ನೀಡುವಂತೆ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸುತ್ತಲೇ ಬರುತ್ತಿದ್ದರೂ ಕೇಂದ್ರ ಸರ್ಕಾರ ಇದನ್ನು ನಿರಾಕರಿಸಿಕೊಂಡೇ ಬರುತ್ತಿರುವುದು ಖಂಡನೀಯ ಎಂದರು.

ಸಿಪಿಎಂನ ಕಾರ್ಯದರ್ಶಿ ಗಿರೀಶ್ ಮಾತನಾಡಿ, ದಿನೇ ಹೆಚ್ಚುತ್ತಿರುವ ಬೆಲೆಯಿಂದ ಸುಮಾರು ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಅದರಲ್ಲೂ ತುಮಕೂರಿನಲ್ಲಿರುವ ಕೈಗಾರಿಕೆಗಳ ಪರಿಸ್ಥಿತಿ ಹೇಳತೀರದು ಎಂದು ವಿಷಾದಿಸಿದರು.

ಎಸ್‌ಯುಸಿಐ ಕಾರ್ಯದರ್ಶಿ ಎಸ್‌.ಎಸ್‌.ಸ್ವಾಮಿ ಮಾತನಾಡಿ, ಸರಣಿ ಬೆಲೆ ಏರಿಕೆ ಮಾಡಿಕೊಂಡು ಬರುತ್ತಿರುವ ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಿಪಿಎಂನ ಕಾರ್ಯದರ್ಶಿ ಎನ್‌.ಕೆ.ಸುಬ್ರಹ್ಮಣ್ಯ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !