ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ದೌರ್ಜನ್ಯಕ್ಕೆ ಖಂಡನೆ; ಅಯ್ಯಪ್ಪ ಭಕ್ತರ ಪ್ರತಿಭಟನೆ

Last Updated 19 ಅಕ್ಟೋಬರ್ 2018, 15:23 IST
ಅಕ್ಷರ ಗಾತ್ರ

ತುಮಕೂರು: ಶಬರಿ ಮಲೆ ಪಂಪಾ ಸಮೀಪದ ನೀಲಕ್ಕಲ್‌ನಲ್ಲಿ ಶಾಂತಿಯುತವಾಗಿ ‘ಶರಣು ಘೋಷ’ ಮಾಡುತ್ತಿದ್ದ ಅಯ್ಯಪ್ಪ ಭಕ್ತರ ಮೇಲೆ ಪೊಲೀಸರು ವಿನಾಕಾರಣ ಲಾಠಿ ಪ್ರಹಾರ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಶುಕ್ರವಾರ ನಗರದ ಚಿಕ್ಕಪೇಟೆ ಗಾರ್ಡನ್ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಶಬರಿ ಮಲೆ ಅಯ್ಯಪ್ಪ ಸೇವಾ ಸಮಾಜಂ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಬೆಳಿಗ್ಗೆ ಪ್ರತಿಭಟನೆ ನಡೆಸಿದ ಭಕ್ತರು ಪೊಲೀಸರ ಕ್ರಮವನ್ನು ಖಂಡಿಸಿದರು.

ಅಯ್ಯಪ್ಪಸ್ವಾಮಿ ಭಕ್ತರಿಗೆ ಪೊಲೀಸರು ವಿನಾಕಾರಣ ತೊಂದರೆ ಕೊಟ್ಟಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ ಅವರ ಮೇಲೆ ದೌರ್ಜನ್ಯ ಮೆರೆದಿದ್ದಾರೆ ಎಂದು ಅಯ್ಯಪ್ಪ ಸೇವಾ ಸಮಾಜಂ ರಾಷ್ಟ್ರೀಯ ಘಟಕದ ಅಧ್ಯಕ್ಷ ಟಿ.ಬಿ.ಶೇಖರ್ ಆರೋಪಿಸಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಎನ್.ಕೃಷ್ಣಯ್ಯ, ಖಜಾಂಚಿ ಜೈಪ್ರಕಾಶ್, ಮಹಿಳಾ ಘಟಕದ ನಾಗರತ್ನ ಪ್ರಸಾದ್, ಜಿಲ್ಲಾ ಘಟಕದ ಕಾರ್ಯದರ್ಶಿ ಸತ್ಯನಾರಾಯಣ್, ಖಜಾಂಚಿ ನರಸಿಂಹಸ್ವಾಮಿ, ಸಂಘಟನಾ ಕಾರ್ಯದರ್ಶಿ ಭೀಮಯ್ಯ, ಯೋಗಂ ಕಾರ್ಯದರ್ಶಿ ವಸಂತ್, ನಿರ್ದೇಶಕರಾದ ಭಾಸ್ಕರಾಚಾರ್, ನಿರ್ಮಲ್‌ಕುಮಾರ್, ಪ್ರಮೋದ್, ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT