ಭಾನುವಾರ, ಫೆಬ್ರವರಿ 28, 2021
31 °C

ಮಹಾರಾಷ್ಟ್ರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕನ್ನಡ ಭಾಷೆ, ನೆಲ, ಜಲ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎಂಇಎಸ್ ಕಾರ್ಯಕರ್ತರ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಭಾಷಾವಾರು ಪ್ರಾಂತ್ಯಗಳ ವಿಂಗಡಣೆ ನಂತರ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ಉದ್ಭವಿಸಿದ್ದ ಗಡಿ ವಿವಾದಕ್ಕೆ ಮಹಾಜನ್ ವರದಿಯೇ ಅಂತಿಮವಾಗಿದೆ. ಇದು ಹಲವಾರು ಬಾರಿ ರಾಷ್ಟ್ರಮಟ್ಟದಲ್ಲಿ ವ್ಯಕ್ತವಾಗಿದ್ದರೂ ಪದೇ ಪದೇ ಮಹಾರಾಷ್ಟ್ರದ ಎಂಇಎಸ್, ಆ ರಾಜ್ಯದ ಜನಪ್ರತಿನಿಧಿಗಳು ಕ್ಯಾತೆ ತೆಗೆಯುತ್ತಿದ್ದಾರೆ. ಮರಾಠಿ ಮಾತನಾಡುವ ಪ್ರದೇಶಗಳಾದ ಬೆಳಗಾವಿ ಮತ್ತಿತರ ಪ್ರದೇಶಗಳನ್ನು ತನ್ನ ವಶಕ್ಕೆ ಪಡೆಯುವುದಾಗಿ ಹೇಳಿಕೆ ನೀಡುವ ಮೂಲಕ ಎರಡು ರಾಜ್ಯಗಳ ನಡುವೆ ಇರುವ ಸೌಹಾರ್ದ ಕೆದಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥಗೌಡ ಟೀಕಿಸಿದರು.

ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಬುದ್ಧಿವಾದ ಹೇಳಬೇಕು. ರಾಜ್ಯದ ಗಡಿ ತಂಟೆಗೆ ಯಾರೂ ಬರಬಾರದು ಆಗ್ರಹಿಸಿದರು.

ಮುಖಂಡರಾದ ಶ್ರೀನಿವಾಸಗೌಡ, ಆಟೊ ಶಿವರಾಜು, ಮಂಜುನಾಥ್, ಕುಂಭಯ್ಯ, ಲೋಕೇಶ್, ಲೀಲಾವತಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು