ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಶಿರಸ್ತೇದಾರ್‌ಗೆ ಮನವಿ
Last Updated 12 ಫೆಬ್ರುವರಿ 2021, 2:42 IST
ಅಕ್ಷರ ಗಾತ್ರ

ಕುಣಿಗಲ್: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತಾಲ್ಲೂಕು ಘಟಕದ ಅಧ್ಯಕ್ಷ ರಂಗಣ್ಣಗೌಡ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಸಂಘಟಿತರಾದ ನೂರಾರು ಕಾರ್ಯಕರ್ತರು ತಾಲ್ಲೂಕು ಕಚೇರಿವೆರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಶಿರಸ್ತೇದಾರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಪ್ರಚಾರ ಸಮಿತಿಯ ಅಧ್ಯಕ್ಷ ಬೇಗೂರು ನಾರಾಯಣ್, ನರೇಂದ್ರ ಮೋದಿ ಅಧಿಕಾರದಲ್ಲಿ ಸಾಮಾನ್ಯನಿಗೆ ಅಚ್ಚೇ ದಿನ್ ಬಂದಿಲ್ಲ. ಕಾರ್ಪೊರೇಟ್‌ ಕಂಪನಿಗಳಿಗೆ ಅಚ್ಚೇ ದಿನಗಳು ಬಂದಿವೆ. ತೈಲಗಳ ಮೇಲೆ ಅಧಿಕ ತೆರಿಗೆ ವಿಧಿಸಿ ಅನ್ಯಾಯ ಮಾಡುತ್ತಿದ್ದಾರೆ. ತೆರಿಗೆ ಭಾರದಲ್ಲಿ ಸಾಮಾನ್ಯರು ಕುಗ್ಗಿ ಹೋಗುತ್ತಿದ್ದು, ನೆಮ್ಮದಿಯ ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪ ದರ ಏರಿಕೆಯಾದರೆ ಬಿಜೆಪಿ ಮತ್ತು ಮಿತ್ರ ಪಕ್ಷ್ಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದು. ಈಗ ನಿರಂತರ ಬೆಲೆ ಏರಿಕೆಯಾಗುತ್ತಿದೆ. ಪ್ರತಿಭಟನೆ ಮಾಡಿದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ತಲೆಕೆಡಿಸಿಕೊಳ್ಳದೆ ಅಂದ ದರ್ಬಾರು ಮಾಡುತ್ತಿವೆ ಎಂದರು.

ಪುರಸಭೆ ಅದ್ಯಕ್ಷ ನಾಗೇಂದ್ರ, ಉಪಾಧ್ಯಕ್ಷೆ ಮಂಜುಳಾ ರಂಗಪ್ಪ, ಸದಸ್ಯ ರಂಗಸ್ವಾಮಿ, ರೂಪಿಣಿ, ಜಯಲಕ್ಷ್ಮಿ, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ರೋಹಿತ್, ಮುಖಂಡರುಗಳಾದ ರೆಹಮಾನ್ ಷರೀಫ್, ಮುಮ್ತಾಜ್ ಅಹಮದ್, ಹಾಲುವಾಗಿಲು ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT