ಮಂಗಳವಾರ, ಮಾರ್ಚ್ 28, 2023
33 °C
ಚನ್ನಬಸವೇಶ್ವರ ದೇವಾಲಯ ಆವರಣದಿಂದ ಮೆರವಣಿಗೆ

ಪರಿಶಿಷ್ಟರ ಮೇಲೆ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಬ್ಬಿ: ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಕೊನೆಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಚನ್ನಬಸವೇಶ್ವರ ದೇವಾಲಯ ಆವರಣದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಬಂದು ಪ್ರತಿಭಟಿಸಿದರು. ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು ಎಂದು ಆಗ್ರಹಿಸಿದರು.

ತಾಲ್ಲೂಕಿನಲ್ಲಿ ಪರಿಶಿಷ್ಟರ ಕಾಲೊನಿಗಳು ಇರುವ ಕಡೆ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ಜಮೀನು ಮಂಜೂರಾದವರಿಗೆ ಖಾತೆ, ಪಹಣಿ ಮಾಡಿಕೊಡಬೇಕು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ದೌರ್ಜನ್ಯ ಹಿತರಕ್ಷಣಾ ಸಮಿತಿ ಸಭೆ ಕರೆಯಬೇಕು. ಪರಿಶಿಷ್ಟರ ಕೇರಿಗಳಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ರಾಜೇಶ್, ತಾಲ್ಲೂಕು ಸಮಿತಿ ಅಧ್ಯಕ್ಷ ಸೋಮು, ಉಪಾಧ್ಯಕ್ಷ ಸೋಮಶೇಖರ್, ಪದಾಧಿಕಾರಿಗಳಾದ ನಾರಾಯಣ್ ಮಂಜುನಾಥ, ಸುರೇಶ್, ನವೀನ್ ಕುಮಾರ್, ನಿಧಿ ಕುಮಾರ್, ಕೃಷ್ಣಮೂರ್ತಿ, ಮಹೇಶ್, ವೆಂಕಟೇಶ್, ಬಲರಾಜ್, ರಂಗಸ್ವಾಮಿ, ಅಮರ್, ನರಸಿಂಹರಾಜು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.