ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಗಿರಿ ಪಿಡಿಒ ವಿರುದ್ಧ ಪ್ರತಿಭಟನೆ; ವರ್ಗಾವಣೆಗೆ ಗ್ರಾ.ಪಂ ಸದಸ್ಯರ ಆಗ್ರಹ

Last Updated 27 ಆಗಸ್ಟ್ 2021, 1:57 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರಂತರವಾಗಿ ಗೈರಾಗುತ್ತಿದ್ದು, ಪಂಚಾಯಿತಿಯಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದು ಆರೋಪಿಸಿದ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾ.ಪಂ ಅಧ್ಯಕ್ಷೆ ಕೆ.ಟಿ. ಸವಿತಾ ಮಾತನಾಡಿ, ಪಿಡಿಒ ಸಂತೋಷ್ ಸಿಂಗ್ ಅವರು ನಿರಂತರವಾಗಿ ಗೈರಾಗುತ್ತಿದ್ದಾರೆ. ಗ್ರಾಮದ ಸಮಸ್ಯೆಗಳ ಬಗ್ಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಕಳೆದ ವರ್ಷದಿಂದ ನರೇಗಾ ಯೋಜನೆಯಲ್ಲಿ ಮಾಡಿದ ಕಾಮಗಾರಿಗಳ ಬಿಲ್ ಮಾಡಿಕೊಡುತ್ತಿಲ್ಲ. ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ. ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡುತ್ತಿಲ್ಲ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಇದರ ಬಗ್ಗೆ ಸದಸ್ಯರು ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಾರೆ. ಇವರನ್ನು ತಕ್ಷಣ ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ್ ಮಾತನಾಡಿ, ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲೆಯಲ್ಲಿ ನಡೆದ ಸಭೆಯಲ್ಲಿ ಪಿಡಿಒ ಸಂತೋಷ್ ಸಿಂಗ್ ವಿರುದ್ಧ ಸದಸ್ಯರು ದೂರು ನೀಡಿದ್ದರು. ಇವರ ಕಾರ್ಯವೈಖರಿ ಕಂಡ ಸಚಿವರು ಅಮಾನತು ಮಾಡುವಂತೆ ಸಿಇಒಗೆ ಸೂಚಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ತಾ.ಪಂ. ಇಒ ಡಿ.ದೊಡ್ಡಸಿದ್ದಪ್ಪ ಅವರು ಚಂದ್ರಗಿರಿ ಗ್ರಾ.ಪಂ.ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದಾಗ, ಗ್ರಾ.ಪಂ ಕಚೇರಿಯ ಮೇಲ್ಭಾಗದಲ್ಲಿ ರಾಷ್ಟ್ರಧ್ವಜ ಹಾರಿಸದಿರುವುದನ್ನು ಗಮನಿಸಿ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ಬಳಿಕ ಸದಸ್ಯರು ಪ್ರತಿಭಟನೆ ಕೈಬಿಟ್ಟರು.

ಗ್ರಾ.ಪಂ ಉಪಾಧ್ಯಕ್ಷೆ ಚಿಕ್ಕತಾಯಮ್ಮ, ಸದಸ್ಯರಾದ ರಾಜಮ್ಮ, ರೇಣುಕಮ್ಮ, ವನಜಾಕ್ಷಿ, ಭಾಗ್ಯಮ್ಮ, ಈರಮ್ಮ, ತಿಮ್ಮಯ್ಯ, ಸಿ.ಆರ್.ರವಿ, ಶ್ರೀನಿವಾಸ್, ನರಸಿಂಹಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT