ಶಿರಾ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರ ಮುಚ್ಚಿರುವುದನ್ನು ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಸರ್ಕಾರಿ ಆಸ್ಪತ್ರೆಗಳ ಬಳಿಯ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರವನ್ನು ಈಗಾಗಲೇ ಮುಚ್ಚಿದ್ದು ಅದನ್ನು ಪ್ರಾರಂಭಿಸುವುದನ್ನು ಬಿಟ್ಟು ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಬಳಿ ಇರುವ ಎಲ್ಲ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರ ಜೊತೆ ಸೇರಿ ಪ್ರತಿಭಟನೆ ನಡೆಸಿದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದರೆ ಜನ ವಿರೋಧಿ ಕಾಂಗ್ರೆಸ್ ಸರ್ಕಾರ ಅವುಗಳನ್ನು ಮುಚ್ಚಿಸಲು ಹೊರಟಿರುವುದು ಖಂಡನೀಯ ಎಂದರು.

ಕೇಂದ್ರ ಸರ್ಕಾರದ ಜನೌಷಧಿ ಯೋಜನೆಯನ್ನು ವಿರೋಧಿಸುವ ರಾಜ್ಯ ಸರ್ಕಾರ ಕೇಂದ್ರದ ಜಲಜೀವನ್, ನರೇಗಾ, ಆಹಾರ ಭದ್ರತಾ ಯೋಜನೆಯಲ್ಲಿ ನೀಡುತ್ತಿರುವ ಅಕ್ಕಿಯನ್ನು ವಾಪಸ್ ನೀಡಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಹಿಂದಟು ಹಾಕುತ್ತಿದೆ ಜು.1 ರೊಳಗೆ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ. ಮುಖ್ಯಮಂತ್ರಿ ಹಾಗೂ ಸಚಿವರು ರಾಜ್ಯ ಒಡಾಟ ನಡೆಸುವುದು ಕಷ್ಟವಾಗುವುದು. ಪಕ್ಕದ ಆಂಧ್ರಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಈಗಾಗಲೇ ಒಳ ಮೀಸಲಾತಿ ಜಾರಿಗೊಳಿಸಿದ್ದು, ನಮ್ಮಲ್ಲಿ ಇಚ್ಛಾಶಕ್ತಿ ಕೊರತೆಯಿಂದಾಗಿ ಸಾಧ್ಯವಾಗಿಲ್ಲ ಎಂದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಉಮಾ ವಿಜಯರಾಜು, ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಚಿಕ್ಕನಕೋಟೆ ಕರಿಯಣ್ಣ, ಲಕ್ಷೀನಾರಾಯಣ, ಪದ್ಮ, ಕೋಟೆ ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.