ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

Published : 10 ಸೆಪ್ಟೆಂಬರ್ 2024, 6:11 IST
Last Updated : 10 ಸೆಪ್ಟೆಂಬರ್ 2024, 6:11 IST
ಫಾಲೋ ಮಾಡಿ
Comments

ತುಮಕೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು ಯಥಾವತ್ತು ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

‘ಸುಪ್ರೀಂ ಕೋರ್ಟ್‌ ಮೀಸಲಾತಿ ಹಂಚಿಕೆ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ. ತೀರ್ಪು ಬಂದು ತಿಂಗಳು ಕಳೆದರೂ ರಾಜ್ಯ ಸರ್ಕಾರ ಮೀಸಲಾತಿ ಜಾರಿಗೆ ಮುಂದಾಗಿಲ್ಲ. ಕೆನೆಪದರದ ನೆಪ ಹೇಳಿಕೊಂಡು ತೀರ್ಪು ಜಾರಿಗೆ ಮೀನಾಮೇಷ ಎಣಿಸುತ್ತಿದೆ. ಸರ್ಕಾರದ ನಿರ್ಲಕ್ಷ್ಯ ಖಂಡನೀಯ’ ಎಂದು ‍ಪ್ರತಿಭಟನಕಾರರು ಹೇಳಿದರು.

ಕಾಂಗ್ರೆಸ್‌ ನಾಯಕರು ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದ್ದರು. ಪ್ರಣಾಳಿಕೆಯಲ್ಲಿ ಈ ಅಂಶ ಸೇರಿಸಿದ್ದರು. ಈಗ ಯಾವುದೇ ಕ್ರಮಕೈಗೊಳ್ಳದೆ ಇರುವುದು ಸರ್ಕಾರದ ಗೋಸುಂಬೆತನಕ್ಕೆ ಸಾಕ್ಷಿಯಾಗಿದೆ ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನ ಬುದ್ಧಿ ಕಲಿಸಿದ್ದಾರೆ. ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ದಲಿತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್‌.ರಾಮಯ್ಯ, ಪದಾಧಿಕಾರಿಗಳಾದ ಹಟ್ಟಯ್ಯ, ಪುಟ್ಟಸ್ವಾಮಿ, ಲಕ್ಷ್ಮಮ್ಮ, ಮುಖಂಡರಾದ ನರಸೀಯಪ್ಪ, ಸುನೀಲ್, ಚಿಣ್ಣನಹಳ್ಳಿ ರಾಜು, ಮಂಜುನಾಥ್, ಡಿ.ಚಂದ್ರಶೇಖರ್‌, ಗಂಗಣ್ಣ, ಎ.ರಂಜನ್, ಆಟೊ ಶಿವರಾಜು, ನರಸಿಂಹಮೂರ್ತಿ ಚೇಳೂರು, ಮುಬಾರಕ್‌ ಸಮೀರ್, ಅಫೀದ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT