ತುಮಕೂರು: ನಿವೃತ್ತ ನೌಕರರ ಇಪಿಎಸ್ ಪಿಂಚಣಿ ಕನಿಷ್ಠ ಮೊತ್ತವನ್ನು ಹೆಚ್ಚಿಸಬೇಕು, ಹೆಚ್ಚುವರಿ ಪಿಂಚಿಣಿ ನೀಡಬೇಕು ಎಂದು ಎನ್ಎಸಿ ರಾಷ್ಟ್ರೀಯ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಆಗ್ರಹಿಸಿದರು.

ನಗರದಲ್ಲಿ ಕೆಎಸ್ಆರ್ಟಿಸಿ ತುಮಕೂರು ವಿಭಾಗದ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿದ್ದ ಮೊದಲ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿ, ಹೋರಾಟ ನಡೆಸಲಾಗಿದೆ. ಉನ್ನತ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ, ಸಮಸ್ಯೆ ಮನವರಿಕೆ ಮಾಡಿಕೊಡಲಾಗಿದೆ. ನಮ್ಮ ಹೋರಾಟ ನಿರ್ಣಾಯಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಪಿಂಚಣಿ ಕನಿಷ್ಠ ಮೊತ್ತವನ್ನು ಮಾಸಿಕ ₹7,500ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ನಿಗಮ, ಮಂಡಳಿಗಳಲ್ಲಿ ಕೆಲಸ ಮಾಡಿ ನಿವೃತ್ತಿಯ ನಂತರ, ಸಂಧ್ಯಾಕಾಲದಲ್ಲಿ ಗೌರವಯುತ ಜೀವನ ನಡೆಸಲು ಪಿಂಚಣಿ ಮೊತ್ತ ಹೆಚ್ಚಿಸಬೇಕು. ಸುಪ್ರೀಂ ಕೋರ್ಟ್ ಸಹ ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ನಿರ್ದೇಶಿಸಿದೆ ಎಂದರು.

ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಆರ್.ಸುಬ್ಬಣ್ಣ, ‘ಕೆಎಸ್ಆರ್ಟಿಸಿ ಸಿಬ್ಬಂದಿ, ನೌಕರರ ಪಿಂಚಿಣಿಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಬದಲಾಗಬೇಕಿದೆ. ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಲಿಖಿತ ಭರವಸೆ ನೀಡಿದೆ’ ಎಂದು ತಿಳಿಸಿದರು.

ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್, ನಿವೃತ್ತ ಅಧಿಕಾರಿ ಗಜೇಂದ್ರಕುಮಾರ್, ಟ್ರಸ್ಟ್ ಅಧ್ಯಕ್ಷ ಭೀಮಾನಾಯ್ಕ್, ಕನ್ನಡ ಸೇನೆ ಅಧ್ಯಕ್ಷ ಧನಿಯಕುಮಾರ್, ಟ್ರಸ್ಟ್ ಪದಾಧಿಕಾರಿಗಳಾದ ಕುಲಕರ್ಣಿ, ದೊಡ್ಡೇಗೌಡ, ಡಿಟಿಒ ಮಂಜುನಾಥ್, ಡಿಎಂಇ ಅಶೀಫ್ವುಲ್ಲಾ ಷರೀಫ್, ಮುಖಂಡರಾದ ಕುಂಭಯ್ಯ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.