ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್ | ಹೆದ್ದಾರಿ ಒತ್ತುವರಿ ಆರೋಪ: ತೆರವಿಗೆ ಒತ್ತಾಯಿಸಿ ಪ್ರತಿಭಟನೆ

Published 1 ಡಿಸೆಂಬರ್ 2023, 13:41 IST
Last Updated 1 ಡಿಸೆಂಬರ್ 2023, 13:41 IST
ಅಕ್ಷರ ಗಾತ್ರ

ಕುಣಿಗಲ್: ‘ರಾಷ್ಟ್ರೀಯ ಹೆದ್ದಾರಿ 75ನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸುತ್ತಿದ್ದು, ಇದನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಿರತ ಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಕೊಪ್ಪ ಗ್ರಾಮ ಪಂಚಾಯಿತಿ ಸರ್ವೇ ನಂಬರ್‌ 24-1ರಲ್ಲಿ ಜಾಗ ಅತಿಕ್ರಮಿಸಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಗ್ರಾಮ ಪಂಚಾಯಿತಿಯವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ದೂರಿದರು.

ಗ್ರಾಮ ಪಂಚಾಯಿತಿ ಪಿಡಿಒ ಓಂಕಾರಪ್ಪ ಭೇಟಿ ನೀಡಿ, ಲಕ್ಷ್ಮಣ ಅವರು ನೀಡಿದ ದೂರಿನ ಮೇರೆಗೆ ಪರಿಶೀಲನೆ ನಡೆಸಿದರು.

ಒತ್ತುವರಿದಾರರಿಗೆ ದಾಖಲೆಗಳನ್ನು ಹಾಜರು ಪಡಿಸಲು ಸೂಚನೆ ನೀಡಲಾಗಿದೆ. ಒತ್ತುವರಿದಾರರು ಕಾಲಾವಕಾಶ ನೀಡಿದ ಅವಧಿ ಮುಗಿದ್ದಿದ್ದರೂ, ದಾಖಲೆ ನೀಡದ ಕಾರಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ್ದ ಪ್ರಸ್ತಾವನೆ ಮೇರೆಗೆ ಭೂಪರಿವರ್ತನೆ ಪ್ರದೇಶದಲ್ಲಿ ನಿಯಮ ಬಾಹಿರವಾಗ ನಿರ್ಮಾಣಮಾಡುತ್ತಿರುವ ಕಟ್ಟಡದ ಇ-ಸ್ವತ್ತು ರದ್ದು ಪಡಿಸಲಾಗಿದೆ. ತೆರವು ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾಡಬೇಕಿದೆ. ಅವರ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT