ಮಂಗಳವಾರ, ಆಗಸ್ಟ್ 4, 2020
26 °C

ಇಂದು ಅತಿಥಿ ಉಪನ್ಯಾಸಕ, ಶಿಕ್ಷಕರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 10ರಂದು ಬೆಳಿಗ್ಗೆ 10ರಿಂದ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರು ಆನ್‌ಲೈನ್ ಭಿತ್ತಿಪತ್ರ ಚಳವಳಿ ಹಮ್ಮಿಕೊಂಡಿದ್ದಾರೆ.

ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹೋರಾಟ ಸಮಿತಿ ನೇತೃತ್ವದಲ್ಲಿ ಈ ಚಳವಳಿ ನಡೆಯಲಿದೆ. ಬಾಕಿ ಉಳಿದಿರುವ ವೇತನವನ್ನು ಒಂದೇ ಬಾರಿಗೆ ಈ ಕೂಡಲೇ ಪಾವತಿಸಬೇಕು, ಕೊರೊನಾ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ಸೇವಾ ಭದ್ರತೆ ಒದಗಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಯಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.