ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಕಚೇರಿ ಮುಂದೆ ಪ್ರತಿಭಟನೆ

Last Updated 19 ಸೆಪ್ಟೆಂಬರ್ 2020, 16:55 IST
ಅಕ್ಷರ ಗಾತ್ರ

ತುಮಕೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳಿಗೆ ಅಧಿವೇಶನದಲ್ಲಿ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಸಿಪಿಐ) ಕಾರ್ಯಕರ್ತರು ಶನಿವಾರ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ, ಎಪಿಎಂಸಿ, ಕೈಗಾರಿಕಾ ವ್ಯಾಜ್ಯಗಳು, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಕಾಯ್ದೆಗಳು ರೈತ, ಕಾರ್ಮಿಕ, ಜನ ವಿರೋಧಿಯಾಗಿದ್ದು, ಸಮಾಜದ ಮೇಲೆ ಗಂಭೀರ ಪರಿಣಾಮ ಬೀರಲಿವೆ. ಮುಂಬರುವ ಅಧಿವೇಶನದಲ್ಲಿ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.

ಕೋವಿಡ್ ಸಾಂಕ್ರಾಮಿಕ ಪಿಡುಗಿನಿಂದ ಜನರು ಬಳಲುತ್ತಿರುವ ಸಮಯದಲ್ಲೇ ಪ್ರತಿಭಟನೆಗೂ ಅವಕಾಶ ಸಿಗದಂತೆಮಾಡಿ ಸುಗ್ರೀವಾಜ್ಞೆ ಜಾರಿಮಾಡಲಾಗಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಕಂಪನಿಗಳ ಹಿಡಿತಕ್ಕೆ ನೀಡುವ ಹುನ್ನಾರ ನಡೆದಿದೆ. ಈ ಕಾಯ್ದೆಗಳು ಜಾರಿಗೆ ಬಂದರೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕೃಷಿ ಭೂಮಿ ಕಳೆದುಕೊಂಡು ಬೀದಿಗೆ ಬರಲಿದ್ದಾರೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಆರೋಪಿಸಿದರು.

ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿಗಳಾದ ಶಶಿಕಾಂತ್, ನಾಗಣ್ಣ, ಶಿರಾ ತಾಲ್ಲೂಕು ಮುಖಂಡ ಹಳ್ಳಪ್ಪ, ಗುಬ್ಬಿ ದೊಡ್ಡತಿಮ್ಮಯ್ಯ, ತುಮಕೂರು ಗ್ರಾಮಾಂತರದ ವೆಂಕಟೇಶ್, ದೊಡ್ಡಯ್ಯ, ಆನಂದ, ಕೊರಟಗೆರೆ ವಿಜಯ ಕುಮಾರ್, ಗೋವಿಂದರಾಜು, ಮಧುಗಿರಿ ರಾಜಣ್ಣ, ರಮೇಶ್, ಪದ್ಮನಾಭನ್, ಜಾಫರ್, ಧನುಜ, ದೇವಿಕಾ, ಎಐಎಸ್‌ಎಫ್ ಮುಖಂಡರಾದ ಚಂದ್ರಶೇಖರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT