ಶಿರಾ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.
ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಮೀಸಲಾತಿ ಮುಂದುವರೆಯುವುದು ಈ ಬಗ್ಗೆ ಯಾವುದೇ ಭಯಬೇಡ. ಕಾಂಗ್ರೆಸ್ ಕೇವಲ ಅಪಪ್ರಚಾರ ನಡೆಸುತ್ತಿದ್ದು ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಅವರ ನಿಜ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಪಕ್ಷವೇ ನಿಜವಾದ ಮಿಸಲಾತಿ ವಿರೋಧಿ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಶಿರಾದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾಹುಲ್ ಗಾಂಧಿ ಅವರ ಮಿಸಲಾತಿ ವಿರೋಧಿ ಹೇಳಿಕೆಯನ್ನು ಖಂಡಿಸಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.