ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಗೆ ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ

Last Updated 31 ಮೇ 2021, 2:29 IST
ಅಕ್ಷರ ಗಾತ್ರ

ಗುಬ್ಬಿ: ನಿಟ್ಟೂರಿನಿಂದ ಮೈಸೂರಿಗೆ ತೆರಳುವ ರಸ್ತೆಯು ಕೆ.ಮತ್ತಿಘಟ್ಟ- ನಿಟ್ಟೂರು ನಡುವಿನ ಎರಡು ಕಿಲೋಮೀಟರ್‌ ಹೊರತುಪಡಿಸಿದರೆ ಉಳಿದೆಡೆ ಸಂಪೂರ್ಣವಾಗಿ ಹಾಳಾಗಿದೆ ಎಂದು ಆರೋಪಿಸಿದ ರಾಯರಪಾಳ್ಯ ಗ್ರಾಮಸ್ಥರು ರಸ್ತೆಗೆ ಬಾಳೆಗಿಡ ಹಾಗೂ ಅಡಿಕೆ ಸಸಿಗಳನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳು ಸಮಸ್ಯೆಗೆ ಸ್ಪಂದಿಸದೆ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದರು.

ರಸ್ತೆ ದುರಸ್ತಿ ಮಾಡಿಸದಿದ್ದರೆ ಲಾಕ್‌ಡೌನ್‌ ಬಳಿಕ ಸಂಪೂರ್ಣವಾಗಿ ವಾಹನ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

‌ಅನೇಕ ವರ್ಷಗಳಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಶಾಸಕರು ಹಾಗೂ ಸಂಸದರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳನ್ನು ಕೇಳಿದರೆ ಅನುದಾನವಿಲ್ಲ ಎನ್ನುತ್ತಾರೆ. ಜನಪ್ರತಿನಿಧಿಗಳು ಕೇವಲ ಭರವಸೆಯ ಮಾತುಗಳನ್ನಾಡುತ್ತಾರೆ. ಗ್ರಾಮಸ್ಥರು ಯಾರನ್ನು ಕೇಳಬೇಕು ಎಂದು ಪಾರ್ಥಸಾರಥಿ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT