ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ವೈದ್ಯಾಧಿಕಾರಿ ವರ್ಗಾವಣೆ ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ

Published 1 ಜುಲೈ 2024, 14:23 IST
Last Updated 1 ಜುಲೈ 2024, 14:23 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ದೊಡ್ಡಹುಲಿಕುಂಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜಶೇಖರ್ ಅವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸೋಮವಾರ ಸಾರ್ವಜನಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.

ಗಡಿ ಭಾಗದ ಈ ಆಸ್ಪತ್ರೆಗೆ ಡಾ.ರಾಜಶೇಖರ್ ಅವರು ಬಂದ ನಂತರ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತಾಗಿದೆ. ವೈದ್ಯರು ರೋಗಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರನ್ನು ವರ್ಗಾವಣೆ ಮಾಡುವುದರಿಂದ ಗಡಿ ಭಾಗದ ಜನರಿಗೆ ತೊಂದರೆಯಾಗುತ್ತದೆ. ಇಲ್ಲಿಂದ ತಾಲ್ಲೂಕು ಕೇಂದ್ರಕ್ಕೆ 40 ಕಿ.ಮೀ ದೂರವಿದ್ದು ಅಲ್ಲಿಗೆ ರೋಗಿಗಳು ಹೋಗಿ ಬರಲು ತೊಂದರೆಯಾಗುತ್ತದೆ. ವರ್ಗಾವಣೆಯನ್ನು ರದ್ದುಪಡಿಸಿ ಇಲ್ಲಿಯೇ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದರು.

ರಾಕೇಶ್ ಬಾಬು, ದೊಡ್ಡೇಗೌಡ, ರವಿಕುಮಾರ್, ರಮೇಶ್ ಪಟೇಲ್, ಗಿರೀಶ್, ಈರಣ್ಣ, ಲಕ್ಷ್ಮಣ್, ನರಸಿಂಹಮೂರ್ತಿ, ಶ್ರೀಧರ್, ರಾಜಣ್ಣ, ರಾಮಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT