ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
Last Updated 14 ಫೆಬ್ರುವರಿ 2021, 3:09 IST
ಅಕ್ಷರ ಗಾತ್ರ

ಶಿರಾ: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ, ತೈಲ ಬೆಲೆ ಏರಿಕೆ ಖಂಡಿಸಿ ಶನಿವಾರ ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂಬಾನಿ ಮತ್ತು ಅದಾನಿ ಸೇರಿದಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡಲು ಖಾಸಗೀಕರಣದ ಕಡೆ ಒಲವು ತೋರಿದ್ದಾರೆ. ರೈತರು ಹಾಗೂ ಸಾಮಾನ್ಯರ ಹಿತವನ್ನು ಬಲಿಕೊಡುತ್ತಿದ್ದಾರೆ ಎಂದರು.

ಚುನಾವಣೆ ಸಮಯದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಲು ಮೋದಿ ವಿಫಲರಾಗಿದ್ದಾರೆ. ರೈತರಿಗೆ ಮಾರಕವಾಗಿರುವ 3 ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ 80 ದಿನಗಳಿಂದ ರೈತರು ಪ್ರತಿಭಟನೆ ನಡೆಸಿದರೂ ಸ್ಪಂದಿಸುತ್ತಿಲ್ಲ. ರೈತರ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದರು.

ಆಹಾರ ಹಾಗೂ ಉದ್ಯೋಗ ಭದ್ರತೆಯನ್ನು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ನೀಡಿದರೆ, ಮೋದಿ ಸರ್ಕಾರ ರೈತರ ಬದುಕನ್ನು ಕಿತ್ತುಕೊಳ್ಳುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜ್, ಪಿ.ಆರ್.ಮಂಜುನಾಥ್, ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾಖಾನ್, ಕಲ್ಕೆರೆ ರವಿಕುಮಾರ್, ಡಿ.ಸಿ.ಆಶೋಕ್, ಜಿ.ಎಸ್.ರವಿ, ರಾಮಕೃಷ್ಣಪ್ಪ, ಯುವ ಘಟಕದ ಅಧ್ಯಕ್ಷ ದಯಾನಂದ ಗೌಡ, ಅರೇಹಳ್ಳಿ ರಮೇಶ್, ಗುಳಿಗೇನಹಳ್ಳಿ ನಾಗರಾಜು, ಬಿ.ಎಸ್.ಸತ್ಯನಾರಾಯಣ, ದಾಸರಹಳ್ಳಿ ಗೋಪಾಲ್, ಚನ್ನನಕುಂಟೆ ತಿಪ್ಪೇಶ್, ಹಾರೋಗೆರೆ ಮಹೇಶ್, ಷಣ್ಮುಖಪ್ಪ, ಕೋಟೆ ಲೋಕೇಶ್, ದಿವಾಕರ್ ಗೌಡ, ಶೇಷಾನಾಯ್ಕ, ದೇವರಾಜು, ಸರೋಜಾ ಬಾಯಿ, ಮಂಜುಳಾ ಬಾಯಿ, ಲಕ್ಷ್ಮಿದೇವಮ್ಮ, ರೇಣುಕಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT