ಬುಧವಾರ, ಸೆಪ್ಟೆಂಬರ್ 22, 2021
23 °C
ವೇತನ, ಭವಿಷ್ಯ ನಿಧಿ ಹಣ ನೀಡುವಂತೆ ಆಗ್ರಹ

ಕಣ್ವ ಗಾರ್ಮೆಂಟ್ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಣ್ವ ಗಾರ್ಮೆಂಟ್ ಕಾರ್ಮಿಕರು

ತುಮಕೂರು: ಕಾರ್ಮಿಕರಿಗೆ ಕಾನೂನು ಬದ್ಧವಾಗಿ ನೀಡಬೇಕಾಗಿರುವ ಸಂಬಳ, ರಜೆ ನಗದೀಕರಣ, ಕಾರ್ಮಿಕರ ಭವಿಷ್ಯ ನಿಧಿ ಹಣ ನೀಡುವಂತೆ ಒತ್ತಾಯಿಸಿ ಕಣ್ವ ಕಾರ್ಮಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕರು ಪ್ರತಿಭಟಿಸಿದರು.

ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಮಹಿಳಾ ಕಾರ್ಮಿಕರು ತಮ್ಮ ಸಂಕಷ್ಟಗಳನ್ನು ಹೇಳಿಕೊಂಡರು. ಕಾರ್ಮಿಕರ ಅಹವಾಲುಗಳನ್ನು ಆಲಿಸಿದ ಉಪವಿಭಾಗಾಧಿಕಾರಿ ಮುಂದಿನ 15 ದಿನದ ಒಳಗೆ ವಸ್ತುಸ್ಥಿತಿ ವರದಿ ನೀಡುವಂತೆ ಕಾರ್ಮಿಕ ನಿರೀಕ್ಷಕ ಶ್ರೀಕಾಂತ್ ಅವರಿಗೆ ನಿರ್ದೇಶಿಸಿದರು.

ಮುಂದಿನ 15-20 ದಿನಗಳಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಜಂಟಿ ಸಭೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ‘ಕೊರಟಗೆರೆ ತಾಲ್ಲೂಕಿನ ಬಜ್ಜನಹಳ್ಳಿಯಲ್ಲಿ ಕಣ್ವ ಗಾರ್ಮೆಂಟ್ ಇದೆ. ಈಗ ಅದನ್ನು ಮುಚ್ಚಿದ್ದು ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಅವರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಕಾರ್ಮಿಕರು ಕಳೆದ ಏಳೆಂಟು ವರ್ಷಗಳಿಂದ ದುಡಿಯುತ್ತಿದ್ದಾರೆ. ಏಕಾಏಕಿ ಆಡಳಿತ ಮಂಡಳಿ ಘಟಕ ಮುಚ್ಚಿದ್ದು ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಕೆಲಸದಿಂದ ತೆಗೆದಿದೆ. ಕಾರ್ಮಿಕರಿಗೆ ಕಾನೂನುಬದ್ಧವಾಗಿ ಬರಬೇಕಾಗಿದ್ದ ₹ 1.46 ಕೋಟಿ ಹಣ ಬಂದಿಲ್ಲ. ಇದನ್ನು ಕೊಡಿಸಿಕೊಡಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಕಾರ್ಮಿಕರಾದ ಗೋಪಾಲ್, ಭೀಮೇಗೌಡ, ತಿಮ್ಮಪ್ಪ, ರತ್ನಮ್ಮ, ಶೈಲಾ, ಆನಂದ, ಟೀಮೆಕ್ ಕಾರ್ಮಿಕರ ಸಂಘದ ಉಪಾಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ಫುಟ್‍ಪಾತ್ ವ್ಯಾಪಾರಿಗಳ ಸಂಘದ ಮುತ್ತುರಾಜ್, ವಸೀಂ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು