ಬುಧವಾರ, ಏಪ್ರಿಲ್ 14, 2021
24 °C

ಹಾಗಲವಾಡಿ: ಹಳ್ಳಿಗಳಿಗೂ ಸೌಲಭ್ಯ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಗಲವಾಡಿ: ನಗರಗಳು ಮಾತ್ರವಲ್ಲದೆ ಗ್ರಾಮೀಣ ಭಾಗಕ್ಕೂ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುವುದು ಸರ್ಕಾರದ ಆದ್ಯತೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಆ.ನ.ಲಿಂಗಪ್ಪ ಹೇಳಿದರು.

ಗುಬ್ಬಿ ತಾಲ್ಲೂಕಿನ ಮೂಗನಾಯಕನಕೋಟೆ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಡಾ.ನವ್ಯ ಚಂದ್ರಶೇಖರಬಾಬು ಅವರ ಅನುದಾನದಲ್ಲಿ ಸಿ.ಸಿ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯ ಚಂದ್ರಶೇಖರಬಾಬು ಮಾತನಾಡಿ, ನಿಟ್ಟೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ತಾಲ್ಲೂಕು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಎಂ.ಎನ್.ಭೀಮಶೆಟ್ಟಿ, ಮುಖಂಡ ಸಿದ್ದರಾಮಣ್ಣ, ವಕೀಲ ಕಾಂತರಾಜು, ಓಂಕಾರಮೂರ್ತಿ, ನಟರಾಜು, ಬಸವರಾಜು, ಕೃಷ್ಣಮೂರ್ತಿ, ಸೋಮಣ್ಣ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.