ಸೋಮವಾರ, ಏಪ್ರಿಲ್ 6, 2020
19 °C

ನಾಳೆ ಪಿಎಸ್‌ಐ ಪೊಲೀಸ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌ಐ(ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಭಾನುವಾರ(ಮಾರ್ಚ್ 8) ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ತುಮಕೂರು ನಗರದ 12 ವಿವಿಧ ಶಾಲೆ, ಕಾಲೇಜು, ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4401 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪತ್ರಿಕೆ–1 ಬೆಳಿಗ್ಗೆ 10 ರಿಂದ 11.30ರವರೆಗೆ ಹಾಗೂ ಪತ್ರಿಕೆ–2 ಮಧ್ಯಾಹ್ನ 1 ರಿಂದ 2.30ರವರೆಗೆ ನಡೆಯಲಿದೆ.

ಅಭ್ಯರ್ಥಿಗಳು ಯಾವುದೇ ಪುಸ್ತಕ, ಕೈಬರಹ ಚೀಟಿ, ಪೇಪರ್, ಕ್ಯಾಲ್ಕುಲೇಟರ್, ಇಯರ್ ಫೋನ್, ಮೊಬೈಲ್, ಬೆಲೆಬಾಳುವ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಒಂದು ಗಂಟೆ ಮುಂಚಿತವಾಗಿ ನಿಗದಿಪಡಿಸಿರುವ ಕಾಲೇಜಿನಲ್ಲಿ ಹಾಜರಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)