ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರಿಗೆ ಬಾಗಿನ

Last Updated 11 ಮೇ 2020, 15:11 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಗೂಳೂರು ಪ್ರೌಢಶಾಲೆ ಆವರಣದಲ್ಲಿ ಕೊರೊನಾ ವಿಚಾರವಾಗಿ ಶ್ರಮಿಸುತ್ತಿರುವ 300 ಆಶಾ ಕಾರ್ಯಕರ್ತೆಯರಿಗೆ ಅರಿಸಿನ, ಕುಂಕುಮ, ಬಳೆ, ಸೀರೆ ಹಾಗೂ ಆಹಾರಧಾನ್ಯಗಳ ಕಿಟ್‌ಗಳನ್ನುಶಾಸಕ ಡಿ.ಸಿ.ಗೌರಿಶಂಕರ್ ವಿತರಿಸಿದರು.

ಈ ವೇಳೆ ಶಾಸಕ ಮಾತನಾಡಿ, ‘60 ಸಾವಿರ ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್, ತರಕಾರಿ, ಹಣ್ಣುಗಳನ್ನು ವಿತರಿಸಲಾಗಿದೆ. ಲಾಕ್‍ಡೌನ್ ಮುಗಿದರೂ ನಿಮ್ಮ ಸೇವೆಗೆ ಸಿದ್ಧನಿದ್ದೇನೆ’ ಎಂದರು.

ತಾಲ್ಲೂಕಿನಲ್ಲಿ ಕೊರೊನಾ ತಡೆ ವಿಚಾರವಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಕಾರ್ಯಕರ್ತೆಯರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

‘ಕ್ಷೇತ್ರದಲ್ಲಿ ಯಾರಿಗಾದರೂ ಔಷಧಿ ಖರೀದಿಸಲು ಸಾಧ್ಯವಾಗದಿದ್ದರೆ ಅಂತಹವರು ನಮಗೆ ಮಾಹಿತಿ ನೀಡಿ. ವೈದ್ಯರು ಕೊಟ್ಟಿರುವ ಚೀಟಿ ನೀಡಿದರೆ ಅವರು ಇದ್ದಲ್ಲಿಗೆ ಔಷಧಿ ತಲುಪಿಸುವ ವ್ಯವಸ್ಥೆ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ತಾಲ್ಲೂಕಿನಲ್ಲಿ ಈಗಾಗಲೇ 2 ಲಕ್ಷ ಮಾಸ್ಕ್ ವಿತರಿಸಲಾಗಿದೆ. ಇನ್ನೂ ಒಂದು ಲಕ್ಷ ಮಾಸ್ಕ್ ವಿತರಿಸಲು ಸಿದ್ಧನಿದ್ದೇನೆ. ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೂ ತಲುಪಿಸುವ ಕಾರ್ಯ ಮಾಡುತ್ತೇನೆ’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಶರತ್‍ಚಂದ್ರ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತ್‍ಕುಮಾರ್, ಟಿ.ಆರ್.ನಾಗರಾಜ್, ವೈ.ಟಿ.ನಾಗರಾಜ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT