ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ಮೇವು ಖರೀದಿ

ಪ್ರತಿ ಟನ್‌ಗೆ ₹3 ಸಾವಿರ ನಿಗದಿ
Published 24 ಫೆಬ್ರುವರಿ 2024, 6:52 IST
Last Updated 24 ಫೆಬ್ರುವರಿ 2024, 6:52 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಮೇವಿನ ಕೊರತೆ ನೀಗಿಸಲು ರೈತರಿಂದ ಮೇವು ಖರೀದಿಸಲು ಜಿಲ್ಲಾ ಆಡಳಿತ ಮುಂದಾಗಿದೆ. ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಿ, ನಂತರ ರೈತರು ಬೆಳೆದ ಮೇವು ಖರೀದಿ ಮಾಡಲು ತೀರ್ಮಾನಿಸಿದೆ.

‘ಮೇವಿನ ಕೊರತೆಯಾಗದಂತೆ ಜಾನುವಾರುಗಳಿಗೆ ಹಸಿ ಮೇವು ಒದಗಿಸಲು, ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಉಚಿತವಾಗಿ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ವಿತರಿಸಲಾಗುತ್ತದೆ. ರೈತರು ಬೆಳೆದ ಹಸಿರು ಮೇವನ್ನು ಪ್ರತಿ ಟನ್‍ಗೆ ₹3 ಸಾವಿರ ನೀಡಿ ಖರೀದಿ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದ್ದಾರೆ.

ಆಸಕ್ತ ರೈತರು ಕಂದಾಯ, ಪಶುಪಾಲನಾ, ಕೃಷಿ ಇಲಾಖೆ ಕಚೇರಿ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದು. ಮೊದಲನೇ ಹಂತದಲ್ಲಿ ಚಿಕ್ಕನಾಯಕನಹಳ್ಳಿ, ತಿಪಟೂರು, ಗುಬ್ಬಿ, ತುರುವೇಕೆರೆ, ಕುಣಿಗಲ್, ತುಮಕೂರು ತಾಲ್ಲೂಕುಗಳಿಗೆ ತಲಾ 2 ಸಾವಿರ ಮಿನಿ ಕಿಟ್‍ಗಳನ್ನು ಉಚಿತವಾಗಿ ವಿತರಿಸಿ, ಮೇವು ಬೆಳೆಯಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT